Gas cylinder: ಗ್ಯಾಸ್ ಸಿಲಿಂಡರ್ ಸ್ಫೋಟ: 9 ಅಯ್ಯಪ್ಪ ಮಾಲಾಧಾರಿಗಳಿಗೆ ಗಂಭೀರ ಗಾಯ!
Gas cylinder: ಏಕಾಏಕಿ ಸಿಲಿಂಡರ್ ಗ್ಯಾಸ್ ಸ್ಫೋಟಗೊಂಡ (Cylinder Blast) ಪರಿಣಾಮ 9 ಅಯ್ಯಪ್ಪ ಮಾಲಾಧಾರಿಗಳು (Ayyappa Devotess) ಗಂಭೀರ ಗಾಯಗೊಂಡಿರುವ ಘಟನೆ ಹುಬ್ಬಳ್ಳಿಯ (Hubballi) ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ನಡೆದಿದೆ.
ಭಾನುವಾರ ತಡರಾತ್ರಿ ಈ ದುರ್ಘಟನೆ ಸಂಭವಿಸಿದ್ದು, ಅಯ್ಯಪ್ಪ ಸ್ವಾಮಿಗಳು ಮಲಗಿದ್ದ ವೇಳೆ ಸಿಲಿಂಡರ್ ಸ್ಫೋಟಗೊಂಡಿದೆ. ಗ್ಯಾಸ್ ಲೀಕ್ ಆಗಿ ದೀಪದ ಬೆಂಕಿ ತಗುಲಿ ಬ್ಲಾಸ್ಟ್ ಆಗಿರುವ ಶಂಕೆ ವ್ಯಕ್ತವಾಗಿದೆ. ಘಟನೆಯಲ್ಲಿ ಗಾಯಗೊಂಡ 9 ಮಾಲಾಧಾರಿಗಳ ಸ್ಥಿತಿ ಚಿಂತಾಜನಕವಾಗಿದೆ.
ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಹುಬ್ಬಳ್ಳಿ -ಧಾರವಾಡ ಡಿಸಿಪಿ ನಂದಗಾವಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.