Drone Pratap : ಸೋಡಿಯಂ ಬಳಸಿ ಸ್ಫೋಟ ಪ್ರಕರಣ – ಡ್ರೋನ್ ಪ್ರತಾಪ್ ಗೆ ಜಾಮೀನು ಮಂಜೂರು !!

Drone Pratap: ಸೋಡಿಯಂ ಮೆಟಲ್ ಬಳಸಿಕೊಂಡು ಕೃಷಿಹೊಂಡದಲ್ಲಿ ಸ್ಫೋಟದ ಪ್ರಯೋಗ ಮಾಡಿದ್ದ ಬಿಗ್ ಬಾಸ್ ನ ಮಾಜಿ ಸ್ಪರ್ಧಿ ಡ್ರೋನ್ ಪ್ರತಾಪ್ಗೆ(Drone Pratap)ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಹೌದು, ಹೊಂಡದಲ್ಲಿ ಸೋಡಿಯಂ ಮೆಟಲ್ ಬಳಸಿ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬಿಗ್ ಬಾಸ್ ಮಾಜಿ ಸ್ಪರ್ಧೆ ಡ್ರೋನ್ ಪ್ರತಾಪ್ ಗೆ ಜಾಮೀನು ಮಂಜೂರು ಆಗಿದೆ. ತುಮಕೂರು ಜಿಲ್ಲೆಯ ಮಧುಗಿರಿ 4ನೇ ಹೆಚ್ಚುವರಿ ಸೇಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

ಸ್ಫೋಟ ಪ್ರಕರಣ ಸಂಬಂಧ ಪ್ರತಾಪ್ ವಿರುದ್ಧ ಮಿಡಿಗೇಶಿ ಠಾಣೆಯ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದರು. ಬಳಿಕ ಕೋರ್ಟ್ ಪ್ರತಾಪ್ ಅವರನ್ನು ನ್ಯಾಯಾಂಗ ಬಂಧನ ವಿಧಿಸಿತ್ತು. ಇದೀಗ ಜಾಮೀನು ಮಂಜೂರು ಮಾಡಿದೆ. ಮಧುಗಿರಿ ತಾಲೂಕಿನ ಜನಕಲೋಟಿ ಗ್ರಾಮದ ಕೃಷಿಹೊಂಡದಲ್ಲಿ ಪ್ರತಾಪ್ ಸ್ಪೋಟ ಮಾಡಿ ಅದರ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಕ್ಕೆ ಟೀಕೆಗಳು ವ್ಯಕ್ತವಾಗಿದ್ದವು. ಬಳಿಕ ಅವರ ಬಂಧನವಾಗಿತ್ತು.

ಇನ್ನು ವಿಚಾರಣೆ ವೇಳೆ ಡ್ರೋನ್​ ಪ್ರತಾಪ್​ ಹಲವು ಸಂಗತಿಯಗಳನ್ನು ಬಾಯಿಬಿಟ್ಟಿದ್ದಾರೆ. ​ಇದಕ್ಕೂ ‌ಮುನ್ನ ಎರಡು ಬಾರಿ ಇದೇ ರೀತಿಯ ಸ್ಫೋಟಿಸಿದ್ದೆ. ಸ್ಫೋಟದ ದೃಶ್ಯವನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿದು ಯೂಟ್ಯೂಬ್​​ನಲ್ಲಿ ಅಪ್ಲೋಡ್​ ಮಾಡಿದ್ದೆ ಎಂದು ಡ್ರೋನ್​ ಪ್ರತಾಪ್ ಪೊಲೀಸರ ಮುಂದೆ ಹೇಳಿದ್ದಾರೆ. ಯೂಟ್ಯೂಬ್​​ನಿಂದ 100 ಡಾಲರ್ ಬಂದಿತ್ತು. ಹೀಗಾಗಿ, ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಸೋಡಿಯಂ ಬಳಸಿ ಸ್ಫೋಟಿಸಿದೆ. ಸ್ಫೋಟದ ವಿಡಿಯೋವನ್ನು ಯೂಟ್ಯೂಬ್​ನಲ್ಲಿ ಅಪ್ಲೋಡ್​​ ಮಾಡಿದೆ. ಇದರಿಂದ ಬರುವ ಹಣವನ್ನು ಸಮಾಜ ಕಾರ್ಯಕ್ಕೆ ಉಪಯೋಗಿಸಲು ನಿರ್ಧರಿಸಿದ್ದೇನೆ ಎಂದು ಬಾಯಿ ಬಿಟ್ಟಿದ್ದಾರೆ. ಅಲ್ಲದೆ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಸ್ಫೋಟವಾಗುತ್ತದೆ ಎಂದು ನನಗೆ ಅರಿವಿರಲಿಲ್ಲ. ಸ್ಫೋಟವಾದ ಬಳಿಕ ನನಗೆ ಅರಿವು ಆಗಿದೆ ಎಂದು ಪೊಲೀಸರ ಮುಂದೆ ಹೇಳಿದ್ದರು.

Leave A Reply

Your email address will not be published.