School Holiday: ಡಿ.26 ಮತ್ತು 27 ಎರಡು ದಿನ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ; ಬೆಳಗಾವಿಯಲ್ಲಿ ನಡೆಯಲಿದೆ ಗಾಂಧಿ ಭಾರತ ಕಾರ್ಯಕ್ರಮ

School Holiday: ಬೆಳಗಾವಿಯಲ್ಲಿ ಅಖಿಲ ಭಾರತ ಕಾಂಗ್ರೆಸ್‌ ಮಹಾ ಅಧಿವೇಶನ ನಡೆದು ನೂರು ವರ್ಷಗಳು ತುಂಬುತ್ತಿದ್ದು, ಇದಕ್ಕಾಗಿ ರಾಜ್ಯ ಸರಕಾರ ಮತ್ತು ಕಾಂಗ್ರೆಸ್‌ ಪಕ್ಷ ಇದನ್ನು ವಿಜೃಂಭಣೆಯಿಂದ ಆಚರಿಸಲು ನಿರ್ಧಾರ ಮಾಡಿದೆ. ಗಾಂಧಿ ಭಾರತ ಕಾರ್ಯಕ್ರಮಕ್ಕಾಗಿ ಬೆಳಗಾವಿ ಮದುಮಗಳಂತೆ ಶೃಂಗಾರಗೊಂಡಿದೆ.

ಈ ಕಾರ್ಯಕ್ರಮ ಹಿನ್ನೆಲೆಯಲ್ಲಿ ಬೆಳಗಾವಿ ನಗರ ಮತ್ತು ತಾಲೂಕಿನ ಸರಕಾರಿ, ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ. ಡಿ.26 ಮತ್ತು 27 ಎರಡು ದಿನ ರಜೆ ಘೋಷಣೆ ಮಾಡಿ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್‌ ಆದೇಶ ಹೊರಡಿದ್ದಾರೆ.

ನಾಳೆ ಗುರುವಾರ ಸಂಜೆ ಪೀರನವಾಡಿಯಲ್ಲಿರುವ ಗಾಂಧಿ ಭವನದಲ್ಲಿ ಎಐಸಿಸಿ ಕಾರ್ಯಕಾರಿಣಿ ಸಭೆ ನಡೆಯಲಿದೆ. ಡಿನ್ನರ್‌ ಪಾರ್ಟಿ ಇರಲಿದ್ದು, ಇದರ ಉಸ್ತುವಾರಿ ಖರ್ಗೆ ಆಯೋಜನೆ ಮಾಡಿದ್ದಾರೆ. ಸುವರ್ಣ ಸೌಧದಲ್ಲಿ ಗಾಂಧಿ ಪ್ರತಿಮೆ ಉದ್ಘಾಟನೆ ಇರಲಿದ್ದು, ಫೊಟೋ ಸೆಷನ್‌ ಕೂಡಾ ಇರಲಿದೆ.

ಬೆಳಗಾವಿಯಲ್ಲಿ ನಡೆಯುವ ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್‌ನ ಧುರೀಣರು ಭಾಗವಹಿಸಲಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಕಾಂಗ್ರೆಸ್‌ ಅಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು, ಎಲ್ಲಾ ರಾಜ್ಯಗಳ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, 140 ಸಂಸದರು ನಾಳೆ (ಡಿಸೆಂಬರ್ 26) ಬೆಳಗಾವಿಗೆ ಆಗಮಿಸಲಿದ್ದು, ಪ್ರಮುಖ ನಾಯಕರಿಗೆ ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ವಾಸ್ತವ್ಯ ವ್ಯವಸ್ಥೆ ಮಾಡಲಾಗಿದೆ.

Leave A Reply

Your email address will not be published.