Anna malai : ತನ್ನ ಮನೆ ಎದುರೇ ಬರಿ ಮೈಗೆ ಚಾಟಿ ಹಿಡಿದು ರಪ್.. ರಪ್ ಎಂದು ಹೊಡೆದುಕೊಂಡ ಅಣ್ಣಾಮಲೈ !! ಕಾರಣ ಏನು? ವಿಡಿಯೋ ವೈರಲ್

Anna Malai: ತಮಿಳುನಾಡಿನ ಡಿಎಂಕೆ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆಯುವವರೆಗೆ ಚಪ್ಪಲಿ ಧರಿಸುವುದಿಲ್ಲ’ ಎಂದು ಬಿಜೆಪಿ ತಮಿಳುನಾಡು ರಾಜ್ಯಾಧ್ಯಕ್ಷ ಅಣ್ಣಾಮಲೈ(Anna Malai) ಪ್ರತಿಜ್ಞೆ ಮಾಡಿದ್ದಾರೆ. ಈ ಬೆನ್ನಲ್ಲೇ ಅವರು ತಮ್ಮ ಬರಿ ಮೈಯಿಗೆ ಚಾಟಿ ಬೀಸಿಕೊಂಡು ವಿನೂತನವಾಗಿ ಪ್ರತಿಭಟನೆ ಮಾಡಿದ್ದಾರೆ.

 

ತಮಿಳುನಾಡಿನ ಪ್ರತಿಷ್ಠಿತ ಅಣ್ಣಾ ವಿಶ್ವವಿದ್ಯಾನಿಲಯದ ಆವರಣದಲ್ಲಿ ಅಪರಿಚಿತ ವ್ಯಕ್ತಿಗಳು ಎರಡನೇ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಸಂಬಂಧ, ಸಂತ್ರಸ್ತೆ ಡಿ.24 ರಂದು ದೂರು ದಾಖಲಿಸಿದಾಗ ವಿಷಯ ಬೆಳಕಿಗೆ ಬಂದಿತ್ತು. ಈ ಪ್ರಕರಣ ಸದ್ಯ ರಾಜಕೀಯ ತಿರುವು ಪಡೆದುಕೊಂಡಿದೆ. ಹೀಗಾಗಿ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಸರ್ಕಾರ ಕ್ರಮ ಕೈಗೊಳ್ಳದಿರುವುದನ್ನು ವಿರೋಧಿಸಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಸ್ವತಃ ಚಾಟಿ ಬೀಸಿದ್ದಾರೆ. ಸಧ್ಯ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಚಾಟಿ ಬೀಸಿರುವ ವಿಡಿಯೋ ಇದೀಗ ವೈರಲ್ ಆಗಿದೆ.

Leave A Reply

Your email address will not be published.