Simran Singh: ಖ್ಯಾತ ಸೋಶಿಯಲ್ ಮೀಡಿಯಾ ಸ್ಟಾರ್ RJ ಸಿಮ್ರಾನ್ ಸಿಂಗ್ ಶವವಾಗಿ ಪತ್ತೆ – ಆಗಿದ್ದೇನು?
Simran Singh: ಖ್ಯಾತ ಸೋಷಿಯಲ್ ಮೀಡಿಯಾ ಇನ್‌ಫ್ಲ್ಯುಯೆನ್ಸರ್ ಹಾಗೂ RJ ಆಗಿದ್ದ ಸಿಮ್ರಾನ್ ಸಿಂಗ್(Simran Singh) ಗುರುಗ್ರಾಮ್‌ನಲ್ಲಿ ಮೃತರಾಗಿದ್ದಾರೆ. ಅವರ ಈ ಸಾವನ್ನು ಆತ್ಮಹತ್ಯೆ ಎಂದು ಶಂಕಿಸಲಾಗಿದೆ.
ಹೌದು, ಲಕ್ಷಾಂತರ ಅಭಿಮಾನಿಗಳಿಂದ RJ ಸಿಮ್ರಾನ್ ಎಂದು ಕರೆಯಲ್ಪಡುವ ಸಿಮ್ರಾನ್ ಸಿಂಗ್ ಅವರ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಡಿಸೆಂಬರ್ 13ರಂದು ಕೊನೆಯದಾಗಿ ರೀಲ್ ಅನ್ನು ಪೋಸ್ಟ್ ಮಾಡಿಕೊಂಡಿದ್ದಾರೆ. ಆದರೆ ರೇಡಿಯೋ ಜಾಕಿ ಸಿಮ್ರಾನ್ ಸಿಂಗ್ ಗುರುಗ್ರಾಮ್ ಸೆಕ್ಟರ್ 47 ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಸಿಮ್ರಾನ್ ಗುರುಗ್ರಾಮ್ ಸೆಕ್ಟರ್-47ರಲ್ಲಿರುವ ಅಪಾರ್ಟ್‌ಮೆಂಟ್‌ವೊಂದರಲ್ಲಿ ಶವವಾಗಿ ಪತ್ತೆಯಾಗಿರುವುದಾಗಿ ಆಕೆಯ ಸ್ನೇಹಿತನೊಬ್ಬ ಪೊಲೀಸರಿಗೆ ಮಾಹಿತಿ ನೀಡಿದ್ದು, ನಂತರ ಪ್ರಕರಣ ಬೆಳಕಿಗೆ ಬಂದಿದೆ. ಮರಣೋತ್ತರ ಪರೀಕ್ಷೆ ಬಳಿಕ ಆಕೆಯ ಮೃತದೇಹವನ್ನ ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ. ಪೊಲೀಸರು ತನಿಖೆ ಆರಂಬಿಸಿದ್ದಾರೆ.