Anna Malai: ‘ಇದೊಂದು ಕೆಲಸ ಮಾಡುವವರೆಗೂ ನಾನು ಚಪ್ಪಲಿ, ಶೂ ಧರಿಸುವುದಿಲ್ಲ’ – ತ. ನಾ ಬಿಜೆಪಿ ಅಧ್ಯಕ್ಷ ಅಣ್ಣಾ ಮಲೈ ಶಪಥ!! ಕಾರಣ ಏನು?
Anna Malai: ತಮಿಳುನಾಡಿನ ಡಿಎಂಕೆ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆಯುವವರೆಗೆ ಚಪ್ಪಲಿ ಧರಿಸುವುದಿಲ್ಲ’ ಎಂದು ಬಿಜೆಪಿ ತಮಿಳುನಾಡು ರಾಜ್ಯಾಧ್ಯಕ್ಷ ಅಣ್ಣಾಮಲೈ(Anna Malai) ಪ್ರತಿಜ್ಞೆ ಮಾಡಿದ್ದಾರೆ.
ಹೌದು, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಸರ್ಕಾರದ ವಿರುದ್ಧ ಕೊಯಮತ್ತೂರಿನಲ್ಲಿ ವಾಗ್ದಾಳಿ ನಡೆಸಿದ ಅಣ್ಣಾಮಲೈ, ‘ಧರಿಸಿದ್ದ ಶೂಗಳನ್ನು ತೆಗೆದು, ಡಿಎಂಕೆ ಸರ್ಕಾರವನ್ನು ಆಡಳಿತದಿಂದ ಕೆಳಗಿಳಿಸುವವರೆಗೆ ಚಪ್ಪಲಿ ಧರಿಸುವುದಿಲ್ಲ’ ಎಂದು ಅಣ್ಣಮಲೈ ಗುಡುಗಿದ್ದಾರೆ.
ಕೊಯಮತ್ತೂರಿನಲ್ಲಿ(Koyamatturu)ಸುದ್ದಿಗಾರರೊಂದಿಗೆ ಮಾತನಾಡಿದ ಅಣ್ಣಾಮಲೈ, ಅಣ್ಣಾ ವಿಶ್ವವಿದ್ಯಾನಿಲಯದ ಲೈಂಗಿಕ ಕಿರುಕುಳ ಪ್ರಕರಣವನ್ನು ಪೊಲೀಸರು ನಿಭಾಯಿಸಿದ ರೀತಿಯನ್ನು ವಿರೋಧಿಸಿದ್ದಾರೆ. ಅಲ್ಲದೆ ಪ್ರಕರಣದಲ್ಲಿ ಸಂತ್ರಸ್ತೆಯ ಹೆಸರು, ಫೋನ್ ಸಂಖ್ಯೆ ಮತ್ತು ಇತರ ವೈಯಕ್ತಿಕ ವಿವರಗಳನ್ನು ಬಹಿರಂಗಪಡಿಸಿದ್ದಕ್ಕಾಗಿ ರಾಜ್ಯ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಅವರು, “ಎಫ್‌ಐಆರ್ ಹೇಗೆ ಸಾರ್ವಜನಿಕ ಡೊಮೇನ್ ಅನ್ನು ಪ್ರವೇಶಿಸಿತು? ಎಫ್‌ಐಆರ್ ಸೋರಿಕೆ ಮಾಡುವ ಮೂಲಕ ಸಂತ್ರಸ್ತೆಯ ಗುರುತನ್ನು ಬಹಿರಂಗಪಡಿಸಿದ್ದೀರಿ. ಇಂತಹ ಎಫ್‌ಐಆರ್ ಬರೆದು ಸೋರಿಕೆ ಮಾಡಿದ್ದಕ್ಕೆ ಪೊಲೀಸರು ಮತ್ತು ಡಿಎಂಕೆಗೆ ನಾಚಿಕೆಯಾಗಬೇಕು,” ಎಂದು ಕಾನೂನು ಸಚಿವ ಎಸ್ ರೇಗುಪತಿ ವಿರುದ್ಧ ವಾಗ್ದಾಳಿ ನಡೆಸಿದರು.