Manmohan Singh no more: ರಾಜ್ಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ !!

Manmohan Singh no more: ಎರಡು ಅವಧಿಗಳ ಕಾಲಕ್ಕೆ ದೇಶದ ಪ್ರಧಾನಿ ಪಟ್ಟವನ್ನು ಅಲಂಕರಿಸಿದ್ದ ದೇಶ ಕಂಡ ಹೆಮ್ಮೆಯ ಪ್ರಧಾನಿ, ಆರ್ಥಿಕ ತಜ್ಞ ಮನಮೋಹನ್‌ ಸಿಂಗ್‌ ಅವರು ನಿಧನರಾಗಿದ್ದಾರೆ. ಈ ಹಿನ್ನಲೆಯಲ್ಲಿ ಇಂದು ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

 

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 92 ವರ್ಷದ ಮನಮೋಹನ್ ಸಿಂಗ್(Manamoha Singh) ದೆಹಲಿಯ ಏಮ್ಸ್​ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಹೀಗಾಗಿ ರಾಜ್ಯಾದ್ಯಂತ ಶಾಲಾ-ಕಾಲೇಜುಗಳಿಗೆ ರಾಜ್ಯ ಸರ್ಕಾರ ರಜೆ ಘೋಷಣೆ ಮಾಡಿದೆ.

 

ಅಲ್ಲದೆ ಮನಮೋಹನ ಸಿಂಗ್ ಅವರ ನಿಧನದ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ಜೊತೆಗೆ ನಾಳೆ ದಿನಾಂಕ 27.12.2024ರಂದು ಸರ್ಕಾರಿ ರಜೆ ಘೋಷಿಸಲಾಗಿದೆ. ಎಲ್ಲ ಸರ್ಕಾರಿ ಕಾರ್ಯಕ್ರಮಗಳನ್ನು ಈಗಾಗಲೇ ಒಂದು ವಾರ ಗಳ ಕಾಲ ರದ್ದು ಮಾಡೋದಾಗಿ ಡಿಸಿಎಂ ಡಿಕೆ ಶಿವಕುಮಾರ್‌ ಅವರು ತಿಳಿಸಿದ್ದಾರೆ.

 

1991 ರಲ್ಲಿ ರಾಜ್ಯಸಭೆಗೆ ಪ್ರವೇಶ ಮಾಡುವ ತಮ್ಮ ರಾಜಕೀಯ ಇನ್ನಿಂಗ್ಸ್ ಆರಂಭಿಸಿದ್ದ ಸಿಂಗ್, 2024ರ ಏಪ್ರಿಲ್​ನಲ್ಲಿ ಅವರ ರಾಜ್ಯಸಭೆ ಅಧಿಕಾರವಧಿ ಅಂತ್ಯವಾಗಿತ್ತು. ಒಟ್ಟಾರೆ ಅವರು ಸಂಸತ್ತಿನ ಮೇಲ್ಮನೆಯಲ್ಲಿ 33 ವರ್ಷಗಳ ಕಾಲ ಸಸ್ಯಾರಾಗಿದ್ದರು. ಸಧ್ಯ ಸಿಂಗ್ ಅವರು ಪತ್ನಿ ಗುರುಶರಣ್ ಕೌರ್ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ.

1 Comment
  1. kuşadası eskort bayan says

    kuşadası eskort bayan Kahve atölyelerine katılarak lezzetli bir sohbet ortamı yaratabilirsiniz. https://portalturystykiaktywnej.pl

Leave A Reply

Your email address will not be published.