Karwar: ಹೊನ್ನಾವರ ಬಳಿ ಅಪಘಾತ; 8 ಜನರಿಗೆ ಗಂಭೀರ ಗಾಯ

ಕಾರವಾರ : ಹೊನ್ನಾವರ ಬಾಳಗದ್ದೆ ಬಳಿ ಬಸ್ ಪಲ್ಟಿಯಾಗಿ ಬಸ್‌ನಲ್ಲಿದ್ದ ಪ್ರವಾಸಿಗರಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ. ಈ ಘಟನೆಯಲ್ಲಿ 8 ಜನ ಪ್ರವಾಸಿಗರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ಇಂದು ಬೆಳಿಗ್ಗೆ ನಡೆದಿದೆ.
20 ಜನ ಪ್ರವಾಸಿಗರು ಬೆಂಗಳೂರುನಿಂದ ಗೋಕರ್ಣಕ್ಕೆ ಬರುತ್ತಿದ್ದಾಗ, ಹೊನ್ನಾವರ ಬಾಳೆಗದ್ದೆ ಬಳಿ ಮಿನಿಬಸ್ ಪಲ್ಟಿಯಾಗಿದೆ. ತೀವ್ರ ಗಾಯಗೊಂಡವರನ್ನು ಮಣಿಪಾಲಕ್ಕೆ ಸಾಗಿಸಲಾಗಿದೆ.
ಹತ್ತು ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅವರನ್ನು ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಹೊನ್ನಾವರ ಪೊಲೀಸರು ಸ್ಥಳಕ್ಕೆ ಆಗಮಿಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.