Bharata Ratna: ಮನ್ಮೋಹನ್ ಸಿಂಗ್ ಗೆ ‘ಭಾರತ ರತ್ನ’?
Bharata Ratna: ಅರ್ಥಶಾಸ್ತ್ರ ಪ್ರಾಧ್ಯಾಪಕನಾಗಿ, ಹಣಕಾಸು ಸಚಿವರಾಗಿ, ಪ್ರಧಾನಿಯಾಗಿ ಇಡೀ ದೇಶದ ಆರ್ಥಿಕ ಸ್ಥಿತಿ ಸುಧಾರಣೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದ ಮನಮೋಹನ್ ಸಿಂಗ್ 92ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ. ಇಂದು ದೆಹಲಿಯಲ್ಲಿ ಅವರ ಅಂತ್ಯಕ್ರಿಯೆ ನೆರವೇರಲಿದೆ. ಈ ಬೆನ್ನಲ್ಲೇ ಮನಮೋಹನ್ ಸಿಂಗ್(Manmohan Singh) ಅವರಿಗೆ ಭಾರತರತ್ನ ಪ್ರಶಸ್ತಿ ನೀಡಬೇಕೆಂದು ಸಾಕಷ್ಟು ಮನವಿಗಳು ಬರುತ್ತವೆ.
ದಶಕಗಳ ಕಾಲ ದೇಶದ ಪ್ರಧಾನಿಯಾಗಿ ಕರ್ತವ್ಯ ನಿರ್ವಹಿಸಿದ ಡಾಕ್ಟರ್ ಮನಮೋಹನ್ ಸಿಂಗ್ ಅವರು ಭಾರತದ ಅಭಿವೃದ್ಧಿಗೆ ಹಲವು ಕೊಡುಗೆಗಳನ್ನು ನೀಡಿದ್ದಾರೆ. ಅದರೊಂದಿಗೆ ಅವರು ಅನೇಕ ಜನ ಪರ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಅಷ್ಟೇ ಅಲ್ಲದೆ 1991ರ ಸಮಯದಲ್ಲಿ ಭಾರತ ಆರ್ಥಿಕ ಮುಗ್ಗಟ್ಟಿನಲ್ಲಿ ಸಿಲುಕಿದ್ದ ಸಮಯದಲ್ಲಿ ಭಾರತೀಯ ಅರ್ಥ ವ್ಯವಸ್ಥೆ ರಕ್ಷಣೆ ಮಾಡಿದ್ದೇ ಮನಮೋಹನ್ ಸಿಂಗ್ ಅವರ ಪಾಂಡಿತ್ಯ. ಹೀಗಿದ್ದಾಗಲೇ ಇಂತಹ ವ್ಯಕ್ತಿಗೆ ‘ಭಾರತ ರತ್ನ’ ಪ್ರಶಸ್ತಿ ಕೊಡದೇ ಇರಲು ಆಗುತ್ತಾ? ಅಂತಾ ಜನರು ಇದೀಗ ಪ್ರಶ್ನೆ ಮಾಡುತ್ತಿದ್ದಾರೆ. ಅಲ್ಲದೆ ಮನಮೋಹನ್ ಸಿಂಗ್ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಲು ಇದೀಗ ದೇಶದ ಮೂಲೆ ಮೂಲೆಯಲ್ಲೂ ಕೂಗು ಕೇಳಿ ಬರುತ್ತಿದೆ.
ಪ್ರಧಾನಿ ನರೇಂದ್ರ ಮೋದಿ ಅವರಿಗೂ ಈ ಬಗ್ಗೆ ರಾಜಕೀಯ ನಾಯಕರು ಮನವಿ ಮಾಡಿ, ಮನಮೋಹನ್ ಸಿಂಗ್ ಅವರಿಗೆ ‘ಭಾರತ ರತ್ನ’ ಪ್ರಶಸ್ತಿ ನೀಡುವಂತೆ ಇದೀಗ ಸೋಷಿಯಲ್ ಮೀಡಿಯಾ ಸೇರಿದಂತೆ ವಿವಿಧೆಡೆ ಡಿಮ್ಯಾಂಡ್ ಇಡುತ್ತಿದ್ದಾರೆ. ಮತ್ತೊಂದು ಕಡೆ ಈಗಾಗಲೇ ಅಂತಿಮ ವಿಧಿವಿಧಾನಕ್ಕಾಗಿ ಸಿದ್ಧತೆ ನಡೆಸಲಾಗಿದ್ದು, ಮನಮೋಹನ್ ಸಿಂಗ್ ಅವರಿಗೆ ‘ಭಾರತ ರತ್ನ’ ಪ್ರಶಸ್ತಿ ನೀಡುವ ಬಗ್ಗೆ ಕೆಲವೇ ದಿನಗಳಲ್ಲಿ ಅಂತಿಮ ನಿರ್ಧಾರ ಹೊರ ಬೀಳುವ ನಿರೀಕ್ಷೆ ಇದೆ.