Poor CM: ದೇಶದ ಅತ್ಯಂತ ಬಡ ಸಿಎಂ ಗಳು ಯಾರ್ಯಾರು?

Share the Article

Poor CM: ಚುನಾವಣಾ ಅಫಿಡವಿಟ್​ನ ಅಂಕಿ ಅಂಶದ ಆಧಾರದ ಮೇಲೆ ಅಸೋಸಿಯೇಷನ್ ​​ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್ ಹಾಗೂ ನ್ಯಾಷನಲ್ ಎಲೆಕ್ಷನ್ ವಾಚ್ ಸಂಸ್ಥೆಗಳು ದೇಶದ ಮುಖ್ಯಮಂತ್ರಿಗಳು ಒಟ್ಟು ಎಷ್ಟು ಆಸ್ತಿಯನ್ನು ಹೊಂದಿದ್ದಾರೆ? ಯಾರು ಅತಿ ಹೆಚ್ಚು ಆಸ್ತಿಯನ್ನು ಹೊಂದುವ ಮೂಲಕ ಶ್ರೀಮಂತ ಮುಖ್ಯಮಂತ್ರಿ ಆಗಿದ್ದಾರೆ?ಎಂಬುದನ್ನು ವರದಿ ಮೂಲಕ ಬಹಿರಂಗಪಡಿಸಿವೆ.

ಬಡ ಸಿಎಂಗಳು:
* ಪ.ಬಂಗಾಳದ ಮಮತಾ ಬ್ಯಾನರ್ಜಿ ಕೇವಲ 15 ಲಕ್ಷ ರು. ಆಸ್ತಿಯೊಂದಿಗೆ ‘ಅತ್ಯಂತ ಬಡವ ಸಿಎಂ’ ಆಗಿದ್ದಾರೆ,
* 55 ಲಕ್ಷ ರು. ಆಸ್ತಿ ಹೊಂದಿರುವ ಜಮ್ಮು- ಕಾಶ್ಮೀರ ಮುಖ್ಯಮಂತ್ರಿ ಒಮರ್‌ಅಬ್ದುಲ್ಲಾ ಅವರು ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದಾರೆ. *
* 1 ಕೋಟಿ ರು. ಆಸ್ತಿಯೊಂದಿಗೆ ಕೇರಳದ ಪಿಣರಾಯಿ ವಿಜಯನ್ 3ನೇ ಸ್ಥಾನದಲ್ಲಿದ್ದಾರೆ

ಶ್ರೀಮಂತ ಸಿಎಂ ಗಳು :
ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು 931 ಕೋಟಿ ರು. ಮೌಲ್ಯದ ಆಸ್ತಿಯೊಂದಿಗೆ ಭಾರತದ ನಂ.1 ಧನಿಕ ಸಿಎಂ ಎನ್ನಿಸಿಕೊಂಡಿದ್ದಾರೆ. ಅರುಣಾಚಲ ಪ್ರದೇಶದ ಪೆಮಾ ಖಂಡು 332 ಕೋಟಿ ರು. ಆಸ್ತಿಯೊಂದಿಗೆ 2ನೇ ಹಾಗೂ 51 ಕೋಟಿ ರು. ಆಸ್ತಿಯೊಂದಿಗೆ ಸಿದ್ದರಾಮಯ್ಯ 3ನೇ ಸ್ಥಾನ ಪಡೆದಿದ್ದಾರೆ.

ಅಂದಹಾಗೆ ಸಿಎಂಗಳ ನಿವ್ವಳ ಆದಾಯ 7.3 ಪಟ್ಟು ಅಧಿಕ: ಭಾರತದ ತಲಾ ನಿವ್ವಳ ರಾಷ್ಟ್ರೀಯ ಆದಾಯ (ಎನ್‌ಎನ್‌ಐ) 2023-2024ರಲ್ಲಿ ಸರಿಸು ಮಾರು 1,85,854 ರು. ಆಗಿದ್ದರೆ, ಮುಖ್ಯ ಮಂತ್ರಿಗಳ ಸರಾಸರಿ ಸ್ವ-ಆದಾಯವು 13,64, 310 ರು. ಆಗಿದೆ. ಇದು ಭಾರತದ ಸರಾಸರಿ ತಲಾ ಆದಾಯಕ್ಕಿಂತ 7.3 ಪಟ್ಟು ಹೆಚ್ಚು ಎಂದು ಈ ವರದಿ ತಿಳಿಸಿದೆ.

Leave A Reply

Your email address will not be published.