Rayachuru : ಅಯ್ಯಪ್ಪ ಸ್ವಾಮಿ ಮಾಲೆ ಹಾಕಿ ಶಬರಿಮಲೆಗೆ ಹೊರಟ ಮುಸ್ಲಿಂ ವ್ಯಕ್ತಿ !!

Rayachuru: ಮುಸ್ಲಿಂ ಸಮುದಾಯದ ವ್ಯಕ್ತಿ ಒಬ್ಬರು ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಯತ್ತ ಪ್ರಯಾಣ ಬೆಳೆಸಿ ಭಾವೈಕ್ಯತೆ ಮೆರೆದ ಅಪರೂಪದ ಘಟನೆ ಒಂದು ರಾಯಚೂರು(Rayachuru) ಜಿಲ್ಲೆಯ ದೇವದುರ್ಗ (Devadurga) ಪಟ್ಟಣದಲ್ಲಿ ನಡೆದಿದೆ.

ಮಕರ ಸಂಕ್ರಾಂತಿ ಪ್ರಯುಕ್ತ ಶಬರಿಮಲೆ ಅಯ್ಯಪ್ಪಸ್ವಾಮಿಗೆ ಹರಕೆ ಹೊತ್ತು ಮಾಲೆ ಧರಿಸುವವರ ಸಂಖ್ಯೆಗೇನು ಕಡಿಮೆ ಇಲ್ಲ. ಈ ನಡುವೆ ಲಕ್ಷಾಂತರ ಹಿಂದು ಭಕ್ತಾದಿಗಳ ನಡುವೆ ಮುಸ್ಲಿಂ ಭಕ್ತರು ಒಬ್ಬರು ಮಾಲೆ ಧರಿಸಿ ಶಬರಿಮಲೆಯತ್ತ ಹೊರಟು ಭಾವೈಕ್ಯತೆ ಮೆರೆದಿರುವುದು ನಿಜಕ್ಕೂ ವಿಶೇಷ. ಅಯ್ಯಪ್ಪ ಮಾಲೆ ಧರಿಸಿದ ವ್ಯಕ್ತಿಯನ್ನು ದೇವದುರ್ಗ ಪಟ್ಟಣದ ಬಾಬು ಗೌರಂಪೇಟ ಎಂದು ಗುರುತಿಸಲಾಗಿದೆ.

ಅಂದಹಾಗೆ ಅನೇಕ ಹಿಂದು ಭಕ್ತರ ಜತೆಗೆ ಬಾಬು ಕೂಡ ಜತೆಯಾಗಿದ್ದಾರೆ. ಪ್ರತಿ ವರ್ಷ ಮಾಲೆ ಧರಿಸಿ ಅಯ್ಯಪ್ಪನ ದರ್ಶನಕ್ಕೆ ತೆರಳುತ್ತಾರೆ. ಸರದಿ ಸಾಲಲ್ಲಿ ನಿಂತು ಅಯ್ಯಪ್ಪನ ದರ್ಶನ ಪಡೆದು ಪುನೀತರಾಗಿದ್ದಾರೆ. ಸಧ್ಯ ಅವರು ಸ್ಥಳೀಯ ಅಯ್ಯಪ್ಪ ಮಾಲಾಧಾರಿಗಳ ಜೊತೆ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಮುಗಿಸಿ ಬಂದಿದ್ದು, ಬಾಬು ಭಕ್ತಿ ಭಾವಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Comments are closed.