Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ

Bantwala: ನೇತ್ರಾವತಿ ನದಿಯಲ್ಲಿ ಜನರನ್ನು ಒಂದು ಕಡೆಯಿಂದ ಇನ್ನೊಂದು ಕಡೆಗೆ ಸಾಗಿಸುವ ಅಂಬಿಗ ನಾಪತ್ತೆಯಾಗಿದ್ದು, ಸ್ಥಳೀಯರು ಹುಡುಕಾಟ ನಡೆಸುತ್ತಿದ್ದಾರೆ. ಜ.3 ಶುಕ್ರವಾರ ಈ ಕುರಿತು ಮಾಹಿತಿ ಹೊರಬಿದ್ದಿದೆ.

ಬಂಟ್ವಾಳ ಬರಿಮಾರು ಕಡವಿನಬಾಗಿಲು ನಿವಾಸಿ ಅಂಬಿಗ ದಿವಾಕರ ನಾಪತ್ತೆಯಾಗಿದ್ದು ಶೋಧ ಕಾರ್ಯ ನಡೆಯುತ್ತಿದೆ.

ನೇತ್ರಾವತಿ ನದಿಯಲ್ಲಿ ದಿವಾಕರ ಅವರು ಸುಮಾರು 30 ವರ್ಷಗಳಿಂದ ಕೆಲಸ ಮಾಡುತ್ತಿದ್ದು, ಇವರು ನುರಿತ ಈಜುಗಾರರು. ಬರಿಮಾರು-ಸರಪಾಡಿಗೆ ದೋಣಿ ಮೂಲಕ ಸಂಪರ್ಕ ಸೇತುವೆಯಾಗಿ ಇವರು ಪ್ರತಿದಿನ ಕೆಲಸ ಮಾಡುತ್ತಿದ್ದರು.

ಜ.3 ರ ಶುಕ್ರವಾರ ಬೆಳಿಗ್ಗೆ ಸುಮಾರು 9 ಗಂಟೆಗೆ ಬರಿಮಾರಿನಿಂದ ಸರಪಾಡಿಗೆ ಹೋಗಿ ಅಲ್ಲಿನ ಅಂಗಡಿಯೊಂದರಿಂದ ಮನೆಗೆ ತರಕಾರಿ ಪಡೆದು, ವಾಪಸ್‌ ತೆರಳಿದ್ದು, 11 ಗಂಟೆ ವೇಳೆ ದೋಣಿ ಬರಿಮಾರು ಕಡವಿನ ಬಾಗಿಲಿನಲ್ಲಿ ತೇಲಾಡುವ ಸ್ಥಿತಿಯಲ್ಲಿ ಕಂಡು ಬಂದಿದೆ. ದಿವಾಕರ ಅವರು ಕಾಣಿಸಿದ ಕಾರಣ ಅವರ ಪತ್ನಿ ಸರಪಾಡಿಯ ಅಂಗಡಿಯ ಮೂಲಕ ಮಾಲಕರಿಗೆ ಫೋನ್‌ ಮಾಡಿ ಸಂಪರ್ಕ ಮಾಡಿದ್ದಾರೆ.

ಬರಿಮಾರು ಕಡವಿನ ಬಾಗಿಲಿನಲ್ಲಿ ಹಸಿಹುಲ್ಲು ಕಟ್ಟು, ಮೊಬೈಲ್‌, ಚಪ್ಪಲಿ ಕಂಡು ಬಂದಿದೆ. ದಿವಾಕರ ಅವರಿಗೆ ಮೂರ್ಛೆರೋಗವಿದ್ದು, ಈ ಹಿಂದೆ ಕೂಡಾ ನದಿ ಬದಿಯಲ್ಲಿ ಬಿದ್ದ ಘಟನೆ ನಡೆದಿತ್ತು. ಇವತ್ತು ಕೂಡಾ ಮೂರ್ಛೆ ರೋಗ ಭಾದಿಸಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತದೆ. ಸ್ಥಳೀಯರು ನದಿ ಸುತ್ತಮುತ್ತ ಹುಡುಕಾಟ ನಡೆಸುತ್ತಿದ್ದು, ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದಾರೆ.

Comments are closed.