Karnataka BJP: ವಿಜಯೇಂದ್ರ ವಿರುದ್ಧ ಅಸಮಾಧಾನ – ಚುನಾವಣೆ ಮೂಲಕ ಹೊಸ ರಾಜ್ಯಾಧ್ಯಕ್ಷರ ಆಯ್ಕೆಗೆ ಮುಂದಾದ ಹೈಕಮಾಂಡ್ !! ಯಾರೆಲ್ಲ ಸ್ಪರ್ಧಿಗಳು?
Karnataka BJP ಅಧ್ಯಕ್ಷ ಬಿ ವೈ ವಿಜಯೇಂದ್ರ ಅವರ ವಿರುದ್ಧ ಪಕ್ಷದಲ್ಲೇ ಅಸಮಾಧಾನ ಭಗಿಲೆದ್ದ ಕಾರಣ ಅವರ ರಾಜ್ಯಾಧ್ಯಕ್ಷಕುರ್ಚಿ ಅಲುಗಾಡುತ್ತಿದೆ ಎಂಬ ಸುದ್ದಿ ಹಲವು ದಿನಗಳಿಂದ ಹರಿದಾಡುತ್ತಲೇ ಇದೆ. ಅಲ್ಲದೆ ರಾಜ್ಯದಲ್ಲಿ ಅನೇಕ ಬಿಜೆಪಿ ನಾಯಕರು ರಾಜ್ಯಾಧ್ಯಕ್ಷ ಹುದ್ದೆಯ ಮೇಲೆ ಕಣ್ಣಿಟ್ಟಿದ್ದಾರೆ. ಈ ನಡುವೆ ಅಚ್ಚರಿ ಎಂಬಂತೆ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಗಾಗಿ ಹೈಕಮಾಂಡ್ ಚುನಾವಣೆ ನಡೆಸಲು ಮುಂದಾಗಿದೆ.
ಹೌದು, ಚುನಾವಣಾ ಅಧಿಕಾರಿಗಳನ್ನು ನೇಮಕ ಮಾಡಿ ಬಿಜೆಪಿ ಹೈಕಮಾಂಡ್ ಆದೇಶ ಹೊರಡಿಸಿದೆ. ಚುನಾವಣಾಧಿಕಾರಿಯಾಗಿ ಶಿವರಾಜ್‌ಸಿಂಗ್ ಚೌಹಾಣ್( Shivraj Singh Chauhan) ಅವರನ್ನು ನೇಮಕ ಮಾಡಲಾಗಿದೆ. ಹೀಗಾಗಿ, ಕರ್ನಾಟಕದಲ್ಲಿ ಹೊಸ ಅಧ್ಯಕ್ಷರ ನೇಮಕವಾಗುವ ಬಗ್ಗೆ ಮತ್ತೊಮ್ಮೆ ಚರ್ಚೆ ಶುರುವಾಗಿದ್ದು, ಇತ್ತ ಹಲವು ನಾಯಕರು ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟಕ್ಕೆ ಬೇಡಿಕೆ ಇಟ್ಟಿದ್ದಾರೆ
ಇನ್ನು ಈ ಕುರಿತು ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ( Prahlad Joshi) ಅವರು ಹಾಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಅವರನ್ನು ಚುನಾವಣೆ ಮೂಲಕ ಆಯ್ಕೆ ಮಾಡಲಾಗಿಲ್ಲ. ಬದಲಾಗಿ ಕೇಂದ್ರ ವರಿಷ್ಠರು ಸೇರಿಕೊಂಡು ಎಲ್ಲ ಸಮ್ಮತಿ ಮೇರೆಗೆ ವಿಜಯೇಂದ್ರ ಅವರನ್ನು ರಾಜ್ಯ ಬಿಜೆಪಿ ನೂತನ ರಾಜ್ಯಾಧ್ಯಕ್ಷರನ್ನಾಗಿ ಮಾಡಲಾಯಿತು. ಆದರೆ ಮುಂದಿನ ದಿನಗಳಲ್ಲಿ ಚುನಾವಣೆ ಮೂಲಕವೇ ಆಯ್ಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಯಾರೆಲ್ಲಾ ಆಕಾಂಕ್ಷಿಗಳು?
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ರೇಸ್ನಲ್ಲಿ ಸಿ ಟಿ ರವಿ, ಅಶ್ವತ್ ನಾರಾಯಣ್, ಆರ್ ಅಶೋಕ್, ಶೋಭಾ ಕರಂದ್ಲಾಜೆ, ಬಸವರಾಜ ಬೊಮ್ಮಾಯಿ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಲಿಂಗಾಯತ ನಾಯಕನ ಹೆಸರು ಕೂಡ ಕೇಳಿಬರುತ್ತಿದೆ.
ಯಾರಗಬಹುದು ಅಧ್ಯಕ್ಷರು?
ಬಿ ವೈ ವಿಜಯೇಂದ್ರ ಅವರನ್ನ ಬಿಜೆಪಿ ಹೈಕಮಾಂಡ್ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ ಬಳಿಕ ಬಿಜೆಪಿ ಪಾಳಯದಲ್ಲಿಯೇ ಯಡಿಯೂರಪ್ಪ ಅವರ ವಿರೋಧಿ ಬಣ ಬಹಿರಂಗವಾಗಿಯೇ ಅಸಮಾಧಾನ ಹೊರ ಹಾಕಿತ್ತು. ನಿರಂತರವಾಗಿ ಬಿಜೆಪಿ ಹೋರಾಟ ಹಾಗೂ ಬಿಜೆಪಿ ಕಾರ್ಯಕ್ರಮಗಳಿಂದ ದೂರವಿದ್ದ ಬಸವನಗೌಡ ಪಾಟೀಲ್ ಯತ್ನಾಳ್ ಅಂಡ್ ಟೀಮ್ ರಾಜ್ಯಾಧ್ಯಕ್ಷ ಬದಲಾವಣೆಗೆ ಪಟ್ಟು ಹಿಡಿಯುವ ಮೂಲಕ ಹೈಕಮಾಂಡ್ ನಾಯಕರ ಮುಂದೆ ತಮ್ಮ ಬೇಡಿಕೆ ಇಟ್ಟಿದ್ದರು. ಮೊದಲಿನಿಂದಲೂ ಉತ್ತರ ಕರ್ನಾಟಕದ ನಾಯಕನಿಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನ ನೀಡಬೇಕು ಎನ್ನುವ ಕೂಗು ಕೇಳಿ ಬಂದಿತ್ತು. ಹೀಗಾಗಿ ಉತ್ತರ ಕರ್ನಾಟಕದ ಲಿಂಗಾಯತ ನಾಯಕ ಅರವಿಂದ್ ಬೆಲ್ಲದ್ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನ ನೀಡುವ ಕುರಿತು ಚರ್ಚೆಯಾಗುತ್ತಿದೆ.
Comments are closed, but trackbacks and pingbacks are open.