KMF: ನಂದಿನಿ ಇಡ್ಲಿ, ದೋಸೆ ಹಿಟ್ಟಿಗೆ ಭರ್ಜರಿ ಡಿಮ್ಯಾಂಡ್ – ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ ನೀಡಿದ KMF
KMF: ನಂದಿನಿ ದೋಸೆ ಮತ್ತು ಇಡ್ಲಿ ಹಿಟ್ಟು, ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಲವೇ ದಿನಗಳಲ್ಲಿ ಭರ್ಜರಿ ಸಕ್ಸಸ್ ಕಂಡಿದೆ. ಈ ಬೆನ್ನಲ್ಲೇ ತನ್ನ ಗ್ರಾಹಕರಿಗೆ ಕೆಎಂಎಫ್ ಭರ್ಜರಿ ಗುಡ್ ನ್ಯೂಸ್ ಅಂದನು ನೀಡಿದೆ.
ಕೇವಲ ಹಾಲಿನ ಮುಖಾಂತರ ಆರಂಭಗೊಂಡ ನಂದಿನಿಯು ನಂತರದ ದಿನಗಳಲ್ಲಿ ಹಲವಾರು ಉತ್ಪನ್ನಗಳನ್ನು ಮಾರುಕಟ್ಟೆಗೆ ಬಿಟ್ಟು ಸಕ್ಸಸ್ ಕಂಡಿತ್ತು. ಇದೀಗ ಮತ್ತೊಂದು ಸಾಹಸಕ್ಕೆ ಕೈ ಹಾಕಿರುವ ನಮ್ಮ ಹೆಮ್ಮೆಯ ನಂದಿನಿ ದೋಸೆ ಮತ್ತು ಇಡ್ಲಿ ಹಿಟ್ಟನ್ನು ಮಾರುಕಟ್ಟೆಗೆ ಬಿಟ್ಟಿದೆ. ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಲವೇ ದಿನಗಳಲ್ಲಿ ಈ ರುಚಿಕರ ದೋಸೆ ಮತ್ತು ಇಡ್ಲಿ ಹಿಟ್ಟಿಗೆ ಗ್ರಾಹಕರು ಮನಸೋತಿದ್ದಾರೆ. ಕೇವಲ ಮೂರೇ ದಿನಗಳಲ್ಲಿ ದಾಖಲೆಯ ಮಟ್ಟದಲ್ಲಿ ಹಿಟ್ಟು ಮಾರಾಟವಾಗಿರುವುದೇ ಇದಕ್ಕೆ ಸಾಕ್ಷಿ. ಅಂದರೆ ದಾಖಲೆ ಮಟ್ಟದಲ್ಲಿ ನಂದಿನಿಯ ಹೊಸ ಉತ್ಪನ್ನ ಮಾರಾಟವಾಗಿದೆ. ಈಗ ಈ ಉತ್ಪನ್ನಕ್ಕೆ ಭಾರೀ ಬೇಡಿಕೆ ಬಂದಿದ್ದು ಗ್ರಾಹಕರಿಗೆ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ.
ಹೌದು, ನಂದಿನಿ’ ಬ್ರ್ಯಾಂಡ್‌ನ ಮೌಲ್ಯ ವೃದ್ಧಿ ಹಾಗೂ ಮಾರುಕಟ್ಟೆ ವಿಸ್ತರಣೆಯ ಭಾಗವಾಗಿ ರಾಜ್ಯ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳವು (ಕೆಎಂಎಫ್) ಇಡ್ಲಿ ಮತ್ತು ದೋಸೆ ಹಿಟ್ಟನ್ನು ಪರಿಚಯಿಸಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ವಾರ ಈ ಹಿಟ್ಟನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದ್ದರು. ಈ ನಂದಿನಿಯ ದೋಸೆ ಮತ್ತು ಇಡ್ಲಿ ಹಿಟ್ಟಿಗೆ ಗ್ರಾಹಕರು ಮನಸೋತಿದ್ದು, ಮಾರುಕಟ್ಟೆಗೆ ಲಗ್ಗೆಯಿಟ್ಟ ಕೇವಲ 3 ದಿನಗಳಲ್ಲಿ 2.250 ಮೆಟ್ರಿಕ್ ಟನ್ ಇಡ್ಲಿ – ದೋಸೆ ಹಿಟ್ಟು ಮಾರಾಟವಾಗಿದೆ. ವೇ ಪ್ರೋಟೀನ್ ಆಧಾರಿತ ಉತ್ಕೃಷ್ಟ ಗುಣಮಟ್ಟದ ನಂದಿನಿ ಇಡ್ಲಿ ಹಾಗೂ ದೋಸೆ ಹಿಟ್ಟನ್ನು ಗ್ರಾಹಕರು ಖುಷಿಯಿಂದ ಮುಗಿಬಿದ್ದು ಖರೀದಿಸುತ್ತಿದ್ದಾರೆ.
ಮೊದಲು ಈ ಉತ್ಪನ್ನವನ್ನು ಬೆಂಗಳೂರಿನ ಕೆಲವು ನಂದಿನಿ ಕೇಂದ್ರಗಳಲ್ಲಿ ಮಾತ್ರ ಪ್ರಾಯೋಗಿಕವಾಗಿ ಬಿಡುಗಡೆ ಮಾಡಲಾಗಿತ್ತು. ಬೆಂಗಳೂರಿಗರಿಂದ ಸಿಕ್ಕಿದ ಅದ್ಭುತ ಪ್ರತಿಕ್ರಿಯೆ ಕೆಎಂಎಫ್ ಉತ್ಸಾಹ ಹೆಚ್ಚಿಸಿದೆ. ಹೀಗಾಗಿ ಇದೀಗ ರಾಜ್ಯದ ಇತರೆ ಭಾಗಗಳಲ್ಲೂ ದೋಸೆ, ಇಡ್ಲಿ ಹಿಟ್ಟು ಮಾರಾಟ ವಿಸ್ತರಿಸಲು ಕೆಎಂಎಫ್ ನಿರ್ಧರಿಸಿದೆ. ಹೀಗಾಗಿ ಕೆಎಂಎಫ್ ರಾಜ್ಯದ ಜನತೆಗೆ ಸಿಹಿ ಸುದ್ದಿ ನೀಡಿದೆ.
ರೇಟ್ ಎಷ್ಟು?
ಕೆಎಂಎಫ್ ಇದೀಗ ನಂದಿನಿ ದೋಸೆ, ಇಡ್ಲಿ ಹಿಟ್ಟಿಗೆ 450 ಗ್ರಾಂ ಹಿಟ್ಟಿಗೆ 40 ರೂ., 900 ಗ್ರಾಂ ಹಿಟ್ಟಿಗೆ 80 ರೂ.ಗಳಂತೆ ಮಾರಾಟ ಮಾಡುತ್ತಿದೆ.
Comments are closed, but trackbacks and pingbacks are open.