West Bengal: ಮಮತಾ ಬ್ಯಾನರ್ಜಿ ಆಪ್ತ ಸಹಾಯಕನನ್ನು ಗುಂಡಿಕ್ಕಿ ಹತ್ಯೆ !!

West Bengal: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆಪ್ತ ಸಹಾಯಕನನ್ನು ಗುಂಡಿಕ್ಕಿ ಹತ್ಯೆಗೈದ ಪ್ರಕರಣ ಬೆಳಕಿಗೆ ಬಂದಿದೆ.

 

ಹೌದು, ಪಶ್ಚಿಮ ಬಂಗಾಳದ(West Bengal) ಮಾಲ್ಡಾದ ಜಲ್ಜಾಲಿಯಾ ಮೋರ್ ಪ್ರದೇಶದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ( Mamatha Banerjee) ಅವರ ಆಪ್ತ ಸಹಾಯಕ ಮತ್ತು ಟಿಎಂಸಿ ಕೌನ್ಸಿಲರ್‌ ಆದ ಬಬ್ಲಾ ಸರ್ಕಾರ್ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಬೈಕ್‌ನಲ್ಲಿ ಬಂದ ಮೂವರು ದಾಳಿಕೋರರು ಈ ಕೃತ್ಯ ಮಾಡಿದ್ದಾರೆ ಎನ್ನಲಾಗಿದೆ.

ಬೈಕ್‌ನಲ್ಲಿ ಬಂದ ಮೂವರು ದಾಳಿಕೋರರು ಬಾಬ್ಲಾ ಅವರನ್ನು ಸುತ್ತುವರಿದು ನಾಲ್ಕು ಸುತ್ತು ಗುಂಡು ಹಾರಿಸಿದ್ದಾರೆ. ಗುಂಡುಗಳು ಅವರ ತಲೆ ಮತ್ತು ಭುಜಕ್ಕೆ ತಗುಲಿ ಗಂಭೀರವಾಗಿ ಗಾಯಗೊಂಡರು. ಬಳಿಕ ಸ್ಥಳೀಯರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ದುಷ್ಕರ್ಮಿಗಳು ಸಮೀಪದಿಂದ ಅವರ ತಲೆಗೆ ಗುಂಡು ಹಾರಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ದಾಳಿಕೋರರು ಯಾರು ಮತ್ತು ಅವರು ಯಾಕೆ ಗುಂಡು ಹಾರಿಸಿದ್ದಾರೆ ಎಂಬುದನ್ನು ಕಂಡುಹಿಡಿಯಲು ಪೊಲೀಸರು ಸಂಪೂರ್ಣ ತನಿಖೆ ನಡೆಸುತ್ತಿದ್ದಾರೆ. ಈ ಘಟನೆಯಿಂದ ಉದ್ವಿಗ್ನತೆ ಉಂಟಾಗಿದೆ. ಪೊಲೀಸರು ಇಡೀ ಪ್ರದೇಶದಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳನ್ನು ಸ್ಕ್ಯಾನ್ ಮಾಡಿ ಆರೋಪಿಗಳ ಪತ್ತೆಗೆ ಪ್ರಯತ್ನಿಸುತ್ತಿದ್ದಾರೆ.

ಈ ಬಗ್ಗೆ ಸಿಎಂ ಮಮತಾ ಬ್ಯಾನರ್ಜಿ ಕೂಡ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡುವ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.

Comments are closed, but trackbacks and pingbacks are open.