Udupi : ಅಧಿಕಾರ ಸ್ವೀಕರಿಸುವ ವೇಳೆ ಮುಸ್ಲಿಂ ಮೌಲ್ವಿ ಕರೆಸಿ ಗ್ರಾ. ಪಂ ಯಲ್ಲಿ ಪ್ರಾರ್ಥನೆ !! ವಿಡಿಯೋ ವೈರಲ್ – ಹಿಂದೂ ಸಂಘಟನೆಗಳಿಂದ ಅಕ್ರೋಶ
Udupi: ಗ್ರಾಮ ಪಂಚಾಯಿತಿ ಕಚೇರಿಯಲ್ಲಿ (Gram Panchayat) ಉಪಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುವ ವೇಳೆ ಮುಸ್ಲಿಂ ಮೌಲ್ವಿಯಿಂದ (Muslim Molvi,) ಪ್ರಾರ್ಥನೆ (Prayer) ಸಲ್ಲಿಸಿರುವ ವಿಚಾರ ಬೆಳಕಿಗೆ ಬಂದಿದ್ದು, ಸಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಅಕ್ರೋಶ ವಕ್ತಪಡಿಸಿದ್ದಾರೆ.
ಹೌದು, ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗಂಗೊಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಈ ಘಟನೆ ನಡೆದಿದೆ. ಗಂಗೊಳ್ಳಿ ಗ್ರಾಮ ಪಂಚಾಯಿತಿ ಕಾಂಗ್ರೆಸ್ ಪಾಲಾಗಿದ್ದು, ಎಸ್ಡಿಪಿಐ ಜೊತೆ ಮೈತ್ರಿ ಮಾಡಿಕೊಂಡು ಅಧಿಕಾರ ಹಂಚಿಕೊಂಡಿದೆ. ಕಾಂಗ್ರೆಸ್ ಸದಸ್ಯೆ ಜಯಂತಿ ಖಾರ್ವಿ ಎಂಬುವವರಿಗೆ ಅಧ್ಯಕ್ಷ ಸ್ಥಾನ ಮತ್ತು ಎಸ್ಡಿಪಿಐ ಬೆಂಬಲಿತ ಸದಸ್ಯ ತಬ್ರೇಜ್ ಎಂಬಾತನಿಗೆ ಉಪಾಧ್ಯಕ್ಷ ಸ್ಥಾನ ಸಿಕ್ಕಿದೆ. ಪಂಚಾಯಿತಿಯ ಉಪಾಧ್ಯಕ್ಷರು ಅಧಿಕಾರ ಸ್ವೀಕರಿಸುವ ವೇಳೆ ಎಸ್ಡಿಪಿಐ ಮುಖಂಡರು ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಮುಸ್ಲಿಂ ಮೌಲ್ವಿ ದುವಾ ಮಾಡಿಸಿದ್ದಾರೆ. ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಧಾರ್ಮಿಕ ಚಟುವಟಿಕೆ ನಡೆಸಿದ ಹಿನ್ನಲೆ ಆಕ್ರೋಶ ವ್ಯಕ್ತವಾಗಿದೆ.
ಇನ್ನು SDPI ಮುಖಂಡರಿಂದ ಮೌಲ್ವಿ ಕರೆಸಿ ದುವಾ ನಡೆಸಿದ್ದನ್ನು ಖಂಡಿಸಿ, ಗಂಗೊಳ್ಳಿ ಹಿಂದು ಹಿತರಕ್ಷಣಾ ವೇದಿಕೆ ಪ್ರತಿಭಟನೆ ನಡೆಸಿದೆ. ಪ್ರತಿಭಟನೆಯಲ್ಲಿ ಭಾಗಿಯಾದ ಬೈಂದೂರು ಎಂಎಲ್‌ಎ ಗುರುರಾಜ್ ಗಂಟಿಹೊಳೆ, ಸಾರ್ವಜನಿಕ ವ್ಯವಸ್ಥೆಗಿರುವ ಕಟ್ಟಡದಲ್ಲಿ ರಾಜಕೀಯ ಲಾಭದ ಬೆಳವಣಿಗೆ ನಡೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ಸೈದ್ಧಾಂತಿಕ ಬದ್ಧತೆ ಇಲ್ಲ, ಕಾನೂನು ಬಾಹಿರ ಎಲ್ಲಾ ಚಟುವಟಿಕೆಗಳಿಗೆ ಅನುವು ಮಾಡಿಕೊಡುತ್ತಿದೆ. ಈ ಬೆಳವಣಿಗೆಯನ್ನು ವಿರೋಧಿಸಿ ಪ್ರತಿಭಟನೆ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.
Comments are closed, but trackbacks and pingbacks are open.