Ujire: ಕಾರು-ಸ್ಕೂಟರ್ ನಡುವೆ ಭೀಕರ ಅಪಘಾತ; ಮಹಿಳೆಗೆ ಗಾಯ
Ujire: ವಿಲೇಜ್ ಹೋಟೆಲ್ ಸಮೀಪ ಕಾರು ಮತ್ತು ಸ್ಕೂಟರ್ ನಡುವೆ ಅಪಘಾತ ನಡೆದಿದ್ದು, ಸ್ಕೂಟರ್‌ನಲ್ಲಿದ್ದ ಮಹಿಳೆಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಜನವರಿ 4 ರ (ಇಂದು) ಮಧ್ಯಾಹ್ನ ಈ ಅಪಘಾತ ನಡೆದಿದೆ.
ಸ್ಕೂಟರ್ ಸವಾರ ಉಜಿರೆಯಿಂದ ಚಾರ್ಮಾಡಿ ಕಡೆಗೆ ಪ್ರಯಾಣ ಮಾಡುತ್ತಿದ್ದು, ಕಾರು ಚಾರ್ಮಾಡಿಯಿಂದ ಉಜಿರೆ ಕಡೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.
ಎರಡು ವಾಹನದ ಮುಂಭಾಗ ಸಂಪೂರ್ಣ ಹಾನಿಯಾಗಿದ್ದು, ಟ್ರಾಫಿಕ್ ಜಾಮ್ ಉಂಟಾಗಿದ್ದು, ಬೆಳ್ತಂಗಡಿ ಸಂಚಾರಿ ಠಾಣೆ ಪೊಲೀಸರು ಸೃಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ.
Comments are closed, but trackbacks and pingbacks are open.