Helicopter Crash: ಪೋರಬಂದರ್ ವಿಮಾನ ನಿಲ್ದಾಣದಲ್ಲಿ ಭೀಕರ ಅಪಘಾತ! ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ, ಮೂವರು ಸಾವು
ವಿಮಾನ ನಿಲ್ದಾಣದಲ್ಲಿ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನಗೊಂಡು, ಮೂವರು ಸಾವಿಗೀಡಾಗಿರುವ ಘಟನೆಯೊಂದು ಗುಜರಾತ್‌ನ ಪೋರಬಂದರ್‌ನಲ್ಲಿ ನಡೆದಿದೆ.
Coast Guard Helicopter Crash: ಗುಜರಾತ್ ನ ಪೋರಬಂದರ್ ವಿಮಾನ ನಿಲ್ದಾಣದಲ್ಲಿ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನಗೊಂಡಿದೆ. ಪೋರಬಂದರ್ ಡಿಎಂ ಎಸ್‌ಡಿ ಧನಾನಿ ಎಬಿಪಿ ನ್ಯೂಸ್‌ನೊಂದಿಗೆ ಮಾತನಾಡುತ್ತಾ ಈ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಅಂತ್ಯಗೊಂಡಿದೆ ಎಂದು ಅವರು ಹೇಳಿದ್ದಾರೆ.. ಅಪಘಾತ ಸಂಭವಿಸಿದ ತಕ್ಷಣ ಅಗ್ನಿಶಾಮಕ ಮತ್ತು ವೈದ್ಯಕೀಯ ತಂಡಗಳು ಸ್ಥಳಕ್ಕೆ ಧಾವಿಸಿವೆ.
ಸುದ್ದಿ ಸಂಸ್ಥೆ ANI ವರದಿಯ ಪ್ರಕಾರ, ಕೋಸ್ಟ್ ಗಾರ್ಡ್‌ನ ALH ಧ್ರುವ ಹೆಲಿಕಾಪ್ಟರ್ ಗುಜರಾತ್‌ನ ಪೋರಬಂದರ್‌ನಲ್ಲಿ ವಾಡಿಕೆಯ ತರಬೇತಿ ಹಾರಾಟದ ಸಮಯದಲ್ಲಿ ಪತನಗೊಂಡಿದೆ ಎಂದು ಭಾರತೀಯ ಕೋಸ್ಟ್ ಗಾರ್ಡ್ ಅಧಿಕಾರಿ ತಿಳಿಸಿದ್ದಾರೆ. ನೆಲಕ್ಕೆ ಅಪ್ಪಳಿಸಿದ ತಕ್ಷಣ ಹೆಲಿಕಾಪ್ಟರ್‌ಗೆ ಬೆಂಕಿ ತಗುಲಿ ಹೊಗೆಯ ಮೋಡ ಹೊರ ಬರಲಾರಂಭಿಸಿತು.
ಇದಕ್ಕೂ ಮೊದಲು ಸೆಪ್ಟೆಂಬರ್ 2, 2024 ರಂದು, ಪೋರಬಂದರ್ ಕರಾವಳಿಯ ಬಳಿ ಅರಬ್ಬಿ ಸಮುದ್ರದಲ್ಲಿ ಭಾರತೀಯ ಕೋಸ್ಟ್ ಗಾರ್ಡ್‌ನ ಸುಧಾರಿತ ಲಘು ಹೆಲಿಕಾಪ್ಟರ್ ಬಿದ್ದಿತ್ತು. ಈ ಅಪಘಾತದ ನಂತರ, ನಾಲ್ಕು ಮಂದಿಯಲ್ಲಿ ಒಬ್ಬರ ಜೀವವನ್ನು ಉಳಿಸಲಾಗಿತ್ತು.
Comments are closed, but trackbacks and pingbacks are open.