Kerala: ಉತ್ಸವದ ವೇಳೆ ಆನೆಗೆ ಮದ – ಸೊಂಡಿಲಿನಿಂದ ಮನುಷ್ಯರನ್ನು ಎತ್ತಿ ಬಿಸಾಡಿ ಆಕ್ರೋಶ !! 20ಕ್ಕೂ ಹೆಚ್ಚು ಮಂದಿಗೆ ಗಾಯ, ಬೆಚ್ಚಿ ಬೀಳಿಸೋ ವಿಡಿಯೋ ವೈರಲ್
Kerala: ಕೇರಳದ ಮಲಪ್ಪುರಂನಲ್ಲಿನ ದೇಗುಲವೊಂದರ ಧಾರ್ಮಿಕ ಉತ್ಸವದ ವೇಳೆ ಆನೆಯೊಂದು ದಾಳಿ ಮಾಡಿದ ಪರಿಣಾಮ ಕನಿಷ್ಠ 20 ಮಂದಿ ಗಾಯಗೊಂಡಿದ್ದಾರೆ. ದೇವರ ದರ್ಶನಕ್ಕೆ ನಿಂತಿದ್ದ ಜನರನ್ನು ಸೊಂಡಿಲಲ್ಲಿ ಎತ್ತಿ ಬಿಸಾಡುತ್ತಿರುವ ಆನೆಯ ಅಘಾತಕಾರಿ ವಿಡಿಯೋ ಇದೀಗ ವೈರಲ್ ಆಗಿದೆ.
ಹೌದು, ಕೇರಳದ(Kerala) ಮಲಪ್ಪುರಂನ ತಿರೂರಿನ ಬಿ.ಪಿ.ಅಂಗಡಿಯ ಜಾರಮ್ ಮೈದಾನದಲ್ಲಿ ಈ ಘಟನೆ ನಡೆದಿದ್ದು. ದೇಗುಲ ಉತ್ಸವಕ್ಕಾಗಿ ಸಿಂಗಾರಗೊಂಡು ನಿಂತಿದ್ದ ಆನೆಯೊಂದು ಏಕಾಏಕಿ ಆಕ್ರೋಶಗೊಂಡು ತನ್ನ ಮುಂದಿದ್ದ ವ್ಯಕ್ತಿ ಮೇಲೆ ಹಲ್ಲೆ ಮಾಡಿದೆ. ವ್ಯಕ್ತಿಯನ್ನು ಸೊಂಡಿಲಿನಿಂದ ಎತ್ತಿಕೊಂಡ ಆನೆ ಏಕಾಏಕಿ ಬಟ್ಟೆ ಒಗೆಯುವಂತೆ ನೆಲಕ್ಕೆ ಒಗೆದಿದೆ.
An #elephant Pakkathu Sreekuttan turned aggressive and flung a man, leaving more than 17 people injured during the Tirur Puthiyangadi festival in #Kerala… pic.twitter.com/oAqhFX50dv
— Yasir Mushtaq (@path2shah) January 8, 2025
ಮೂಲಗಳ ಪ್ರಕಾರ ಇಲ್ಲಿನ ಬಿಪಿ ಅಂಗಡಿಯಲ್ಲಿರುವ ಯಾಹೂ ತಂಗಳ್ ದೇಗುಲದಲ್ಲಿ ನಾಲ್ಕು ದಿನಗಳ ವಾರ್ಷಿಕ ಉತ್ಸವಗಳು ಅಥವಾ ನೇರ್ಚಾ ಕಾರ್ಯಕ್ರಮ ನಡೆಯುತ್ತಿತ್ತು. ಈ ವಿಶೇಷ ಕಾರ್ಯಕ್ರಮಕ್ಕಾಗಿ ತರಬೇತಿ ಪಡೆದ ಆನೆಗಳನ್ನು ಕರೆಸಲಾಗಿತ್ತು. ಧಾರ್ಮಿಕ ಕಾರ್ಯಕ್ರಮದಲ್ಲಿ ಐದು ಆನೆಗಳು ಭಾಗಿಯಾಗಿದ್ದವು. ಆದರೆ ಕಾರ್ಯಕ್ರಮ ಮುಗಿಯುವ ಕೆಲವೇ ಗಂಟೆಗಳ ಮೊದಲು ಪಕ್ಕೋತ್ ಶ್ರೀಕುಟ್ಟನ್ ಎಂಬ ಹೆಸರಿನ ಆನೆಯು ದಿಢೀರ್ ಆಕ್ರೋಶಗೊಂಡು ದಾಳಿ ನಡೆಸಿದೆ.
ಈ ಪೈಕಿ ಪಾಕತ್ ಶ್ರೀಕುಟ್ಟನ್ ಎಂಬ ಹೆಸರಿನ ಆನೆ ವ್ಯಕ್ತಿಯೊಬ್ಬನ ಮೇಲೆ ದಾಳಿ ಮಾಡಿ, ಸೊಂಡಿಲಿನಿಂದ ಎಳೆದು ಬಿಸಾಡಿದೆ. ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಕೊಟ್ಟಕಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಿಂದ ಗಾಬರಿಗೊಂಡ ಜನರು ಓಡಲು ಪ್ರಾರಂಭಿಸಿದ್ದಾರೆ. ಇದರಿಂದ ಕಾಲ್ತುಳಿತವಾಗಿ 17 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳು ತಿರೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾವುತರು ಹರಸಾಹಸಪಟ್ಟು ಆನೆಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.
Comments are closed, but trackbacks and pingbacks are open.