Sunil Kumar: ನಕ್ಸಲರ ಶರಣಾಗತಿ ವಿಚಾರ ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ – ಬಿಜೆಪಿ ಶಾಸಕ ಸುನಿಲ್ ಕುಮಾರ್
Sunil Kumar: ನಕ್ಸಲರು ಶರಣಾಗತಿ ಆಗುತ್ತಿದ್ದು ಈ ಆರು ಮಂದಿ ನಕ್ಸಲರಿಗೆ ರಾಜ್ಯ ಸರಕಾರ ಶರಣಾಗತಿ ಪ್ಯಾಕೇಜ್ ನೀಡುತ್ತಿರುವುದು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ ಎಂದು ಬಿಜೆಪಿ ಶಾಸಕ ಸುನಿಲ್ ಕುಮಾರ್(Sunil Kumar)ಹೇಳಿದ್ದಾರೆ.
ಆರು ಮಂದಿ ನಕ್ಸಲರಿಗೆ ರಾಜ್ಯ ಸರ್ಕಾರ ಶರಣಾಗತಿ ಪ್ಯಾಕೇಜ್ ನೀಡುತ್ತಿರುವುದು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ.
ಯಾವ ಮಾನದಂಡದ ಮೇಲೆ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ?ಎಂಬುದನ್ನು ಸ್ಪಷ್ಟಪಡಿಸಬೇಕು.@siddaramaiah ಅಧಿಕಾರಕ್ಕೆ ಬಂದಾಗೆಲಲ್ಲ ನಕ್ಸಲರಿಗೆ – ಉಗ್ರರಿಗೆ ಸುಗ್ಗಿ.ಅವರಿಗೆ ಕ್ಷಮೆ,ಪ್ರಕರಣ ರದ್ದು, ಸುಖ-ಸೌಕರ್ಯ ಎಲ್ಲವೂ! 1/2— Sunil Kumar Karkala (@karkalasunil) January 8, 2025
ಈ ಕುರಿತು ಎಕ್ಸ್ ಪೋಸ್ಟ್ ಮಾಡಿರುವ ಅವರು ‘ಯಾವ ಮಾನದಂಡದ ಮೇಲೆ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ ? ಎಂಬುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ಪಷ್ಟಪಡಿಸಬೇಕು.
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗೆಲಲ್ಲ ನಕ್ಸಲರಿಗೆ – ಉಗ್ರರಿಗೆ ಸುಗ್ಗಿಯಾಗಿದೆ. ಅವರಿಗೆ ಕ್ಷಮೆ, ಪ್ರಕರಣ ರದ್ದು, ಸುಖ-ಸೌಕರ್ಯ ಎಲ್ಲವೂ ನೀಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಅಲ್ಲದೆ ರಾಷ್ಟ್ರಕವಿ ಕುವೆಂಪು ಅವರ ಕರ್ಮಭೂಮಿಯೂ ಆಗಿದ್ದ ತಣ್ಣಗಿನ ಮಲೆನಾಡು ಭಾಗದಲ್ಲಿ ಬಂದೂಕಿನ ಮೊರೆತ ಕೇಳಿಸಿದ ನಕ್ಸಲರಿಗೆ ಕ್ಷಮೆ ಕೊಟ್ಟು ಅವರನ್ನು ನಗರ ನಕ್ಸಲರಾಗಿಸಿ ಬುಡಮೇಲು ಕೃತ್ಯಕ್ಕೆ ಲೈಸೆನ್ಸ್ ಕೊಡುತ್ತೀರಾ ಸಿದ್ದರಾಮಯ್ಯನವರೇ? ಇದರಿಂದ ಪೊಲೀಸರ ಆತ್ಮ ಸ್ಥೈರ್ಯ ಏನಾಗಬೇಡ ? ಈ ಶರಣಾಗತಿ ಪ್ರಹಸನವೇ ಅನುಮಾನಾಸ್ಪದವಾಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.
Comments are closed, but trackbacks and pingbacks are open.