Tumkuru: ಬಿಜೆಪಿ ಕಾರ್ಯಕರ್ತೆ ಶಂಕುತಲಾ ನಟರಾಜ್‌ ಪುತ್ರ ಆತ್ಮಹತ್ಯೆಗೆ ಶರಣು; ಡೆತ್‌ನೋಟ್‌ ಪತ್ತೆ

Share the Article

Tumkuru: 7 ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ತುಮಕೂರು ನಗರದ ವಿಜಯನಗರ 2ನೇ ಮುಖ್ಯರಸ್ತೆಯಲ್ಲಿ ನಡೆದಿದೆ.

ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್‌ ಅವರ ಪುತ್ರ ತ್ರಿಶಾಲ್‌ ಎಂಬಾತನೇ ಮೃತ ಹೊಂದಿದ್ದು, ಆತ್ಮಹತ್ಯೆಗೂ ಮುನ್ನ ಡೆತ್‌ನೋಟ್‌ ಬರೆದಿಟ್ಟಿದ್ದಾನೆ.

ಪಾರಿವಾಳದ ಬೆಟ್ಟಿಂಗ್‌ ವಿಚಾರಕ್ಕೆ ಸ್ನೇಹಿತರ ನಡುವೆ ಗಲಾಟೆಯಾಗಿದ್ದು, ಈ ವಿಚಾರಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ವರದಿಯಾಗಿದೆ.

ಸ್ಥಳಕ್ಕೆ ಜಯನಗರ ಪೊಲೀಸರು ಭೇಟಿ ನೀಡಿದ್ದು, ಮೃತದೇಹವನ್ನು ತುಮಕೂರು ಜಿಲ್ಲಾಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಈ ಘಟನೆ ಕುರಿತು ಜಯನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Comments are closed.