Gadag: ಬಿಜೆಪಿ ಶಾಸಕ ಚಂದ್ರು ಲಮಾಣಿ ಮನೆಯಲ್ಲಿ ಕಾರು ಚಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ!!

Gadag: ಶಾಸಕ ಡಾ.ಚಂದ್ರು ಲಮಾಣಿ ಅವರ ಕಾರು ಚಾಲಕ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಹೌದು, ಗದಗ(Gadag) ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರಿಗೆ ಸೇರಿದ ಮನೆಯೊಂದರಲ್ಲಿ ಈ ಘಟನೆ ನಡೆದಿದೆ. ಶಾಸಕರ ಕಾರು ಚಾಲಕ ಸುನೀಲ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಕೌಟುಂಬಿಕ ಕಲಹದ ಹಿನ್ನೆಲೆ ಸುನೀಲ್ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ಘಟನೆ ಕುರಿತಂತೆ ಇನ್ನಷ್ಟು ಮಾಹಿತಿ ತಿಳಿದುಬರಬೇಕಿದೆ.
Comments are closed.