Shimoga: ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ತಮ್ಮನ ಕೊಲೆ; ಅಣ್ಣ ಅರೆಸ್ಟ್

Shimoga: ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾ.ಪಂ ವ್ಯಾಪ್ತಿಯ ಅನುಪಿನಕಟ್ಟೆ ಲಂಬಾಣಿ ತಾಂಡದಲ್ಲಿ ಇಂದು ರವಿವಾರ (ಜ.12) ಬೆಳಗ್ಗೆ ಅಣ್ಣನೋರ್ವ ತಮ್ಮನ ಮೇಲೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.
ಗಿರೀಶ್ (30) ಕೊಲೆಯಾದ ವ್ಯಕ್ತಿ. ಅಣ್ಣ ಲೋಕೇಶ್ ತಮ್ಮನ ತಲೆಯ ಮೇಲೆ ಕಲ್ಲು ಎತ್ತಿ ಹಾಕಿದ್ದು, ಗಿರೀಶ್ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೊಲೆ ನಡೆಯಲು ಕಾರಣ ವೈಯಕ್ತಿಕ ವಿಚಾರಕ್ಕೆ ಕೊಲೆ ನಡೆದಿದೆ ಎನ್ನಲಾಗಿದೆ. ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಆರೋಪಿ ಲೋಕೇಶ್‌ನನ್ನು ವಶಕ್ಕೆ ತಗೊಂಡಿದ್ದು, ತನಿಖೆಯನ್ನು ಮುಂದುವರೆಸಿದ್ದಾರೆ.
Comments are closed.