Zameer Ahmed: ಹಸುಗಳ ಕೆಚ್ಚಲು ಕೊಯ್ದ ಪ್ರಕರಣ – ಸಚಿವ ಜಮೀರ್ ಅಹಮದ್ ಹೇಳಿದ್ದೇನು?

Zameer Ahmad: ರಸ್ತೆಯಲ್ಲಿ ಮಲಗಿದ್ದಂತಹ ಮೂರು ಹಸುಗಳ ಕೆಚ್ಚಲುಗಳನ್ನು ಕಿಡಿಗೇಡಿಗಳು ಕೊಯ್ದಿರುವ ಹೀನ ಕೃತ್ಯ ಬೆಂಗಳೂರು ಜಿಲ್ಲೆಯ ಚಾಮರಾಜಪೇಟೆಯಲ್ಲಿ ನಡೆದಿದೆ. ಸದ್ಯಕ್ಕೆ ಚಾಮರಾಜಪೇಟೆಯ ಬಸವ ಆಸ್ಪತ್ರೆಯಲ್ಲಿ ಮೂರು ಹಸುಗಳಿಗೂ ಚಿಕಿತ್ಸೆ ನೀಡಲಾಗುತ್ತಿದೆ. ಇದು ಹಿಂದೂ ನಾಯಕರನ್ನು ಕೆರಳಿಸಿದ್ದು, ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸಿದ್ದರಾಮಯ್ಯ ಅವರು ಕೂಡ ಪ್ರತಿಕ್ರಿಯೆ ನೀಡಿದ್ದು ತನಿಖೆಗೆ ಆಗ್ರಹಿಸಿದ್ದರು. ಈ ಬೆನ್ನಲ್ಲೇ ಕ್ಷೇತ್ರದ ಶಾಸಕ ಹಾಗೂ ಸಚಿವರಾದ ಜಮೀರ್ ಅಹಮದ್( Zameer Ahmad) ಅವರು ಸ್ಥಳಕ್ಕೆ ಭೇಟಿ ನೀಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಯಸ್, ವಿನಾಯಕನಗರ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರತಿಕ್ರಿಯೆ ನೀಡಿದ ಅವರು, ಘಟನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಕಮಿಷನರ್​ ಅವರಿಗೆ ಕರೆ ಮಾಡಿ ಸೂಕ್ತ ಕ್ರಮಕ್ಕೆ ಸೂಚನೆ ನೀಡಿದ್ದು, ನಾನೂ ಸಹ ಪೊಲೀಸರಿಗೆ ಹೇಳಿದ್ದೇನೆ ಎಂದು ತಿಳಿಸಿದರು.

ಅಲ್ಲದೆ ಯಾವುದೇ ದ್ವೇಷ ಇರಲಿ, ಹೀಗೆ ಪ್ರಾಣಿಗಳ ಮೇಲೆ ದೌರ್ಜನ್ಯ ಮಾಡುವುದು ಅಕ್ಷಮ್ಯ ಅಪರಾಧ. ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮಕ್ಕೆ ಸೂಚಿಸಿದ್ದೇನೆ. ಇನ್ನು ನೊಂದ ಕುಟುಂಬದೊಂದಿಗೆ ನಾನಿರಲಿದ್ದು, ಮೂರು ಹೊಸ ಹಸುಗಳನ್ನು ನಾನೇ ಕೊಡಿಸುವೆ ಎಂದು ಇದೇ ವೇಳೆ ಅವರಯ ಭರವಸೆ ನೀಡಿದರು.

ಸಿದ್ದರಾಮಯ್ಯ ಹೇಳಿದ್ದೇನು?
ಚಾಮರಾಜಪೇಟೆಯಲ್ಲಿ ದನಗಳಿಗೆ ಹಿಂಸೆ ನೀಡಿರುವ ಘಟನೆ ಅತ್ಯಂತ ಅಮಾನವೀಯ. ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಶಿಕ್ಷೆಗೆ ಒಳಪಡಿಸಲಾಗುವುದು. ಈವರೆಗೆ ಕೃತ್ಯ ಎಸಗಿದವರ ಮಾಹಿತಿ ನಮಗೆ ಸಿಕ್ಕಿಲ್ಲ. ತಪ್ಪಿತಸ್ಥರನ್ನು ಪತ್ತೆ ಹಚ್ಚಿ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪೊಲೀಸ್ ಕಮೀಷನರ್‌ ಅವರಿಗೆ ಸೂಚಿಸಿದ್ದೇನೆ ಎಂದಿದ್ದಾರೆ.

Comments are closed, but trackbacks and pingbacks are open.