Chennagiri : ಅರಣ್ಯ ಭೂಮಿ ಒತ್ತುವರಿ – ಫಸಲಿಗೆ ಬಂದ 3 ಸಾವಿರ ಅಡಿಕೆ ಗಿಡಗಳನ್ನು ಕಡಿದ ಇಲಾಖೆ !!

Chennagiri: ಇತ್ತೀಚಿನ ದಿನಗಳಲ್ಲಿ ಭೂಮಿ ಒತ್ತುವರಿ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅಂಥವರಿಗೆ ಅರಣ್ಯ ಇಲಾಖೆ ಸರಿಯಾಗಿ ಬಿಸಿ ಮುಟ್ಟಿಸುತ್ತಿದೆ. ಅಂತೆಯೇ ಇದೀಗ ಇಂಥದ್ದೇ ಒಂದು ಪ್ರಕರಣ ಬೆಳಕಿಗೆ ಬಂದಿದ್ದು ಈ ಪ್ರಕರಣದಲ್ಲಿ ಸುಮಾರು 15 ಎಕರೆ ಅರಣ್ಯ ಪ್ರದೇಶವನ್ನ ಒತ್ತುವರಿ ಮಾಡಿದ್ದವರಿಗೆ ಅರಣ್ಯಾಧಿಕಾರಿಗಳು ಶಾಕ್‌ ನೀಡಿದ್ದಾರೆ.

 

ಹೌದು, ದಾವಣಗೆರೆಯ ಚನ್ನಗಿರಿ(Chennagiri) ತಾಲೂಕಿನ ಶಾಂತಿಸಾಗರದಲ್ಲಿ ಅರಣ್ಯ ಭೂಮಿ ಒತ್ತುವರಿ ಮಾಡಿದವರಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಒತ್ತುವರಿ ಮಾಡಿದ್ದ 15 ಎಕರೆ ಅರಣ್ಯ ಪ್ರದೇಶವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಶಾಂತಿಸಾಗರದ ಗುಡುಂಘಟ್ಟದ ಸರ್ವೇ ನಂ.43 ರಲ್ಲಿ 15 ಎಕರೆ ಜಾಗವನ್ನು ವಶಕ್ಕೆ ಪಡೆಯಲಾಗಿದ್ದು, ಈ ಭಾಗದಲ್ಲಿ ಜನರು ಅರಣ್ಯ ಪ್ರದೇಶವನ್ನು ಒತ್ತುವರಿ ಮಾಡಿಕೊಂಡು ಆ ಜಾಗದಲ್ಲಿ ಅಡಿಕೆ ಮತ್ತು ಬಾಳೆ ಬೆಳೆದಿದ್ದರು. ಅಧಿಕಾರಿಗಳು 3 ಸಾವಿರ ಅಡಿಕೆ ಮತ್ತು ಬಾಳೆ ಗಿಡಗಳನ್ನು ತೆರವು ಮಾಡಿ, ಜಾಗವನ್ನು ವಶಕ್ಕೆ ಪಡೆದಿದ್ದಾರೆ.

ಅಂದಹಾಗೆ ಸುಮಾರು ವರ್ಷಗಳಿಂದ ರೈತರು ಅರಣ್ಯ ಪ್ರದೇಶವನ್ನು ಒತ್ತುವರಿ ಮಾಡಿ ಸಾಗುವಳಿ ಮಾಡಿಕೊಂಡು ಅಲ್ಲಿ ಬೆಳೆಗಳನ್ನ ಬೆಳೆಯುತ್ತಾ ಬಂದಿದ್ದರು. ಆ ನಂತರ ಯಾರೂ ಕೇಳುವವರಿಲ್ಲ ಎಂದು ತಿಳಿದ ಮೇಲೆ ಜಾಗದಲ್ಲಿ ಅಡಿಕೆ ತೋಟ ಮಾಡಿದ್ದರು. ಅಡಿಕೆ, ಬಾಳೆಗಿಡಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಸಿಬ್ಬಂದಿಗಳು ತೆರವುಗೊಳಿಸಿದ್ದಾರೆ.

Comments are closed, but trackbacks and pingbacks are open.