Micro Finance: ಮೈಕ್ರೋ ಫೈನಾನ್ಸ್ ಕಿರುಕುಳ – ಊರನ್ನೇ ತೊರೆದ ಗ್ರಾಮಸ್ಥರು!!

Share the Article

Micro Finance: ಮೈಕ್ರೋ ಫೈನಾನ್ಸ್ ಅವರ ಕಿರುಕುಳಕ್ಕೆ ಬೇಸತ್ತು ಊರಿನ ಜನರು ಇಡೀ ಊರನ್ನೇ ತೊರೆದು ಬೇರೆಡೆಗೆ ಹೋದಂತಹ ವಿಚಿತ್ರ ಪ್ರಕರಣ ಚಾಮರಾಜನಗರ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ಹೌದು, ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ (Micro Finance) ಹಾವಳಿ ಹೆಚ್ಚಾಗಿದ್ದು, ಬಡವರ ಜೀವ ಹಿಂಡುತ್ತಿವೆ. ಎಷ್ಟೊ ಜನರು ಆ ಕಂಪನಿಗಳ ಟಾರ್ಚರ್‌ಗೆ ಊರು ಬಿಡುತ್ತಿದ್ದಾರೆ. ಪೋಷಕರು ಇದ್ದಕ್ಕಿದ್ದಂತೆ ಊರು ಬಿಡುತ್ತಿದ್ದಾರೆ, ಇದರಿಂದ ಎಷ್ಟೋ ಮಕ್ಕಳು ಅನಾಥರಾಗುತ್ತಿದ್ದಾರೆ. ಅದರಲ್ಲೂ ಚಾಮರಾಜನಗರ (Chamarajanagar) ಜಿಲ್ಲೆಯ ಹಲವೆಡೆ 100 ಕ್ಕೂ ಹೆಚ್ಚು ಕುಟುಂಬಗಳು ಗ್ರಾಮ ತೊರೆದಿದ್ದಾರೆ. ಹಲವೆಡೆ ಪೋಷಕರು ತಮ್ಮ ಮಕ್ಕಳನ್ನು ಶಾಲೆ ಬಿಡಿಸಿ ಕರೆದೊಯ್ದಿದ್ದಾರೆ. ಸಾಲದ ಹೊಡೆತಕ್ಕೆ ಮಕ್ಕಳ ವಿದ್ಯಾಭ್ಯಾಸವೇ ಮೊಟಕುಗೊಂಡಿದೆ. ಎಲ್ಲಿ ಹೋದರು ಎಂಬುದೇ ಗೊತ್ತಿಲ್ಲ ಎನ್ನುತ್ತಾರೆ ಗ್ರಾಮದಲ್ಲಿ ಅಳಿದು ಉಳಿದ ಜನರು.

ಅಂದಹಾಗೆ ಗೃಹ ಬಳಕೆಯ ಖರ್ಚು ವೆಚ್ಚಗಳಿಗೆ ಮೈಕ್ರೋಫೈನಾನ್ಸ್ ಕಂಪನಿಗಳಿಂದ ಸಾಲ ಪಡೆದಿದ್ದಾರೆ., ಸಾಲದ ಕಂತು ಕಟ್ಟುವುದು ಒಂದು ದಿನ ತಡವಾದರೂ ಮೈಕ್ರೋ ಫೈನಾನ್ಸ್ ಕಂಪನಿಗಳು ಕಿರುಕುಳ ನೀಡಲು ಆರಂಭಿಸಿದ್ದಾರೆ. ಹಾಗಾಗಿ ಜನರು ಅವರಿಂದ ತಪ್ಪಿಸಿಕೊಳ್ಳಲು ಊರಿಗೆ ಊರೇ ಖಾಲಿ ಮಾಡಿದ್ದಾರೆ.

ಇನ್ನೂ ಈ ಖಾಸಗಿ ಮೈಕ್ರೋಫೈನಾನ್ಸ್ ಕಂಪನಿಗಳ ಯಾವ ಪರಿ ಇದೆ ಅಂದರೆ ಬಾಯಿಗೆ ಬಂದಂತೆ ಬಯ್ತಾರಂತೆ ರಾತ್ರಿವೇಳೆ ಹೊತ್ತಲ್ಲದ ಹೊತ್ತಿನಲ್ಲಿ ಬಂದು ಕೆಟ್ಟದಾಗಿ ಬಯ್ತಾರಂತೆ ಅಶ್ಲೀಲವಾಗಿ ನಿಂದಿಸ್ತಾರಂತೆ. ಹಾಗಾಗಿ ಇಲ್ಲೊಬ್ಬ ಬಾಲಕ ನಿಮ್ಮ ಕೈ ಮುಗಿದು ಕೇಳಿಕೊಳ್ತಿನಿ ನನ್ನ ಕಿಡ್ನಿ ಮಾರೋಕೆ ಪರ್ಮಿಷನ್ ಕೊಡಿಸಿ ಸರ್ ..ಸರ್ಕಾರ ಪರ್ಮಿಷನ್ ಕೊಟ್ರೆ ನನ್ನ ಕಿಡ್ನಿ ಮಾರಿ ಅಪ್ಪ ಅಮ್ಮನ ಸಾಲ ತೀರಿಸ್ತೀನಿ ಮೈಕ್ರೋಫೈನಾನ್ಸ್ ನವರ ಕಾಟ ತಡೆಯೋಕೆ ಆಗ್ತಿಲ್ಲ ಅಂತ ಕಣ್ಣೀರು ಇಡುತ್ತಿದ್ದಾನೆ.

ಒಟ್ಟಾರೆ ಇದು ಚಾಮರಾಜನಗರ ಜಿಲ್ಲೆಯೊಂದರೆ ಕಥೆಯಲ್ಲ. ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ನಾಯಿಕೊಡೆಗಳಂತೆ ತಲೆ ಎತ್ತಿರುವ ಖಾಸಗಿ ಮೈಕ್ರೋಫೈನಾನ್ಸ್ ಕಂಪನಿಗಳು ಜನರಿಗೆ ಇನ್ನಿಲ್ಲದಂತೆ ಕಿತ್ತು ತಿನ್ನುತ್ತಿವೆ. ರಾಜ್ಯ ಸರ್ಕಾರದ ಈ ಬಗ್ಗೆ ಗಂಭೀರ ಚಿಂತನೆ ನಡೆಸಿ ಈ ಕಿರುಹಣಕಾಸು ಸಂಸ್ಥೆಗಳ ಕಾರ್ಯನಿರ್ವಹಣೆಗೆ ಕಡಿವಾಣ ಹಾಕುವ ನೀತಿ ರೂಪಿಸಬೇಕಿದೆ.

Comments are closed.