Belagavi : ಕಾರು ಅಪಘಾತ ಪ್ರಕರಣ – ‘ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿದಿದೆ’ ವೈದ್ಯರಿಂದ ಹೇಳಿಕೆ ಬಿಡುಗಡೆ

Belagavi: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬರಗಟ್ಟಿ ಬಳಿ ನಡೆದಿದೆ. ಈ ವೇಳೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬೆನ್ನು ಮೂಳೆಗೆ ಪೆಟ್ಟು ಬಿದ್ದಿದೆ ಎನ್ನಲಾಗಿತ್ತು. ಆದರೆ ಈಗ ವೈದ್ಯರು ಈ ಕುರಿತು ಹೇಳಿಕೆ ಬಿಡುಗಡೆ ಮಾಡಿದ್ದು ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬೆನ್ನು ಮೂಳೆ ಮುರಿದೆ ಎಂದು ಹೇಳಿದ್ದಾರೆ
ಹೌದು, ಬೆಳಗಾವಿ(Belgavi) ಜಿಲ್ಲೆ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಸಮೀಪ ಸಚಿರು ಕಾರ್ ನಲ್ಲಿ ತೆರಳುತ್ತಿದ್ದು ನಾಯಿ ಅಡ್ಡ ಬಂದ ಹಿನ್ನೆಲೆಯಲ್ಲಿ ಅದನ್ನು ತಪ್ಪಿಸಲು ಹೋಗಿ ಕಾರ್ ಅಪಘಾತಕ್ಕೀಡಾಗಿದೆ. ನಿಯಂತ್ರಣ ತಪ್ಪಿದ ಕಾರ್ ಮರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರ್ ನಲ್ಲಿದ್ದ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಅವರ ಸೋದರ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅಪಾಯದಿಂದ ಪಾರಾಗಿದ್ದಾರೆ.
ಸದ್ಯ ಬೆಳಗಾವಿಯ ವಿಜಯ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು ಈ ಕುರಿತು ಆಸ್ಪತ್ರೆಯ ವೈದ್ಯ ರವಿ ಪಾಟೀಲ್ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬೆನ್ನುಮೂಳೆ ಮುರಿದಿದೆ ಎಂದು ಹೇಳಿಕೆ ನೀಡಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಎರಡು ದಿನಗಳ ಬಳಿಕ ಸಚಿವೆ ಹೆಬ್ಬಾಳ್ಕರ್ ಅವರ ಆರೋಗ್ಯದ ಸ್ಥಿತಿ ಪರಿಗಣಿಸಿ ಡಿಸ್ಚಾರ್ಜ್ ಮಾಡಲಾಗುತ್ತದೆ. ಸಚಿವೆ ಹೆಬ್ಬಾಳ್ಕರ್ ಅವರಿಗೆ ಒಂದು ತಿಂಗಳು ಬೆಡ್ ರೆಸ್ಟ್ ಬೇಕಾಗುತ್ತದೆ ಚನ್ನರಾಜಟಿಹೊಳಿ ತಲೆಗೆ ಪೆಟ್ಟಾಗಿದ್ದು ಹೆಚ್ಚಿನ ಗಾಯಗಳಾಗಿಲ್ಲ ಎಂದು ಬೆಳಗಾವಿಯ ವಿಜಯ ರವಿ ಪಾಟೀಲ್ ಕುರಿತು ಹೇಳಿಕೆ ನೀಡಿದರು.
Comments are closed.