Belagavi: ಕಾರು ಅಪಘಾತ, ಲಕ್ಷ್ಮಿ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ- ಸಿ ಟಿ ರವಿ ಹೇಳಿದ್ದೇನು?

Belagavi : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬರಗಟ್ಟಿ ಬಳಿ ನಡೆದಿದೆ. ಈ ವೇಳೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬೆನ್ನು ಮೂಳೆ ಮುರಿದೆ, ಮೆದುಳು ಬಾವು ಕಾಣಿಸಿದೆ ಎಂದು ವೈದ್ಯರು ಹೇಳಿದ್ದಾರೆ. ಇದೀಗ ಸಿ ಟಿ ರವಿಯವರು ಈ ಕುರಿತು ಪ್ರತಿಕ್ರಿಯಿಸಿದ್ದಾರೆ.

ಹೌದು ಕೆಲವು ದಿನಗಳ ಹಿಂದಷ್ಟೇ, ಸುವರ್ಣ ಸೌಧದಲ್ಲಿ ಅಶ್ಲೀಲ ಪದ ಬಳಕೆ ಆರೋಪದ ಸಂಬಂಧ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಹಾಗೂ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ನಡುವಿನ ಗಲಾಟೆ ತಾರಕಕೇರಿತ್ತು. ಇದು ರಾಜ್ಯಾದ್ಯಂತ ಸಾಕಷ್ಟು ಸುದ್ದಿಯಾಗಿತ್ತು. ಬಳಿಕ ಅವರ ನಡುವೆ ವೈಮನಸ್ಸು ಉಂಟಾಗಿತ್ತು. ನಂತರ ಈ ವಿಚಾರ ಕೊಂಚಮಟ್ಟಿಗೆ ತಣ್ಣಗಾಗಿತ್ತು. ಆದರೆ ಇಂದು ಕಾರು ಅಪಘಾತದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಪೆಟ್ಟಾಗಿದೆ. ಈ ಕುರಿತು ಸಿಟಿ ರವಿ ಪ್ರತಿಕ್ರಿಯಿಸಿದ್ದು ಲಕ್ಷ್ಮೀ ಹೆಬ್ಬಾಳ್ಕರ್‌ ಶೀಘ್ರ ಗುಣಮುಖರಾಗಲಿ ಎಂದು ಸಿಟಿ ರವಿ ಟ್ವೀಟ್‌ ಮೂಲಕ ಹಾರೈಸಿದ್ದಾರೆ.

ಸಿಟಿ ರವಿ ಮಾಡಿರುವ ಟ್ವೀಟ್ ಏನು?
‘ಇಂದು ಬೆಳಗಾವಿಯ ಕಿತ್ತೂರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಅವರ ಸಹೋದರ ಶೀಘ್ರ ಗುಣಮುಖರಾಗಲಿ ಎಂದು ಶ್ರೀ ದೇವರಲ್ಲಿ ಪ್ರಾರ್ಥಿಸುವೆ’ ಎಂದು ಬಿಜೆಪಿ ಎಂಎಲ್‌ಸಿ ಸಿಟಿ ರವಿ ಟ್ವೀಟ್‌ ಮಾಡಿದ್ದಾರೆ.

Comments are closed.