Belagavi: ಅಪಘಾತದಲ್ಲಿ ನಜ್ಜು ಗುಜ್ಜಾದ ಕಾರು- ಲಕ್ಷ್ಮಿ ಹೆಬ್ಬಾಳ್ಕರ್ ಬೆನ್ನು ಮೂಳೆಗೆ ತೀವ್ರ ಪೆಟ್ಟು, ಮುಖಕ್ಕೆ ಗಾಯ !!

Belagavi: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬರಗಟ್ಟಿ ಬಳಿ ನಡೆದಿದೆ. ಈ ವೇಳೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬೆನ್ನು ಮೂಳೆಗೆ ಪೆಟ್ಟು ಬಿದ್ದಿದೆ ಎನ್ನಲಾಗಿದೆ.

ಹೌದು, ಬೆಳಗಾವಿ(Belagavi) ಜಿಲ್ಲೆ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಸಮೀಪ ಸಚಿರು ಕಾರ್ ನಲ್ಲಿ ತೆರಳುತ್ತಿದ್ದು ನಾಯಿ ಅಡ್ಡ ಬಂದ ಹಿನ್ನೆಲೆಯಲ್ಲಿ ಅದನ್ನು ತಪ್ಪಿಸಲು ಹೋಗಿ ಕಾರ್ ಅಪಘಾತಕ್ಕೀಡಾಗಿದೆ. ನಿಯಂತ್ರಣ ತಪ್ಪಿದ ಕಾರ್ ಮರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರ್ ನಲ್ಲಿದ್ದ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಅವರ ಸೋದರ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅಪಾಯದಿಂದ ಪಾರಾಗಿದ್ದಾರೆ. ಆದರೆ ಲಕ್ಷ್ಮಿ ಹೆಬ್ಬಾಳ್ಕರ್ ಬೆನ್ನು ಮತ್ತು ಮುಖಕ್ಕೆ ಗಾಯಗಳಾಗಿವೆ. ಬೆಳಗಾವಿ ಖಾಸಗಿ ಆಸ್ಪತ್ರೆಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ದಾಖಲಾಗಿದ್ದಾರೆ. ಅಲ್ಲದೆ ಚನ್ನರಾಜ ಹಟ್ಟಿಹೊಳಿ ಅವರಿಗೆ ತಲೆಗೆ ಪೆಟ್ಟಾಗಿದೆ ಎನ್ನಲಾಗಿದೆ.

ಆಸ್ಪತ್ರೆಗೆ ಬೆಳಗಾವಿ ಎಸ್ ಪಿ ಆಗಮಿಸಿದ್ದು, ಸಚಿವೆ ಲಕ್ಷ್ಮಿಹೆಬ್ಬಾಳ್ಕರ್ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಇನ್ನೂ ಅಪಘಾತದ ಸುದ್ದಿ ತಿಳಿದು ಲಕ್ಷ್ಮೀ ಹೆಬ್ಬಾಳ್ಕರ್ ತಾಯಿ ಕೂಡ ಆಸ್ಪತ್ರೆಗೆ ಆಗಮಿಸಿದ್ದು, ಆರೋಗ್ಯ ವಿಚಾರಿಸಿದ್ದಾರೆ. ಇನ್ನೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ ಸುದ್ದಿ ತಿಳಿದು ಗೃಹ ಸಚಿವರಾದ ಡಾ ಜಿ ಪರಮೇಶ್ವರ್‌ ಅವರು ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

Comments are closed.