Actress Ragini Dwivedi: ಡ್ರಗ್ಸ್ ಕೇಸ್; ನಟಿ ರಾಗಿಣಿ ನಿರಪರಾಧಿ
Actress Ragini Dwivedi: ನಟಿ ರಾಗಿಣಿ ದ್ವಿವೇದಿ ಡ್ರಗ್ಸ್ ಕೇಸ್‌ನಲ್ಲಿ ಹೆಸರು ಕೇಳಿ ಬಂದಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟಿಯ ವಿರುದ್ಧ ಯಾವುದೇ ಸಾಕ್ಷ್ಯ ಸಿಗದ ಕಾರಣ ಕೇಸ್ ಖುಲಾಸೆ ಮಾಡಿ ಹೈಕೋರ್ಟ್ ಆದೇಶ ನೀಡಿದ್ದು, ರಾಗಿಣಿ ರಿಲೀಫ್ ಆಗಿದ್ದಾರೆ.
ನಟಿ ರಾಗಿಣಿ ಮೇಲೆ ಡ್ರಗ್ಸ್ ಮಾಫಿಯಾದೊಂದಿಗೆ ನಂಟು ಹೊಂದಿರುವ ಆರೋಪವಿತ್ತು. ಪಾರ್ಟಿ ಆಯೋಜನೆ ಮಾಡಿ ಡ್ರಗ್ಸ್ ಬಳಕೆಗೆ ಅವರು ಅವಕಾಶ ಮಾಡಿಕೊಟ್ಟಿದ್ದರು ಎನ್ನಲಾಗಿತ್ತು. ಇದಕ್ಕೆ ಕುರಿತಂತೆ ಎನ್‌ಡಿಪಿಎಸ್ ಆಕ್ಟ್ ಅಡಿಯಲ್ಲಿ ಅವರ ವಿರುದ್ಧ ಕೇಸ್ ದಾಖಲು ಮಾಡಲಾಗಿತ್ತು. ಆದರೆ ಈ ಕುರಿತು ಯಾವುದೇ ಸಾಕ್ಷ್ಯಾಧಾರ ದೊರಕಿಲ್ಲ ಎಂದು ವರದಿಯಾಗಿದೆ.
ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡರ್ ಅವರ ನೇತೃತ್ವದ ಹೈಕೋರ್ಟ್ ಏಕಸದಸ್ಯ ಪೀಠ ಪ್ರಕರಣ ರದ್ದುಪಡಿಸಿ ಆದೇಶ ಹೊರಡಿಸಿದೆ.
Comments are closed, but trackbacks and pingbacks are open.