Belagavi : ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತಕ್ಕೂ ಧರ್ಮಸ್ಥಳದ ಆಣೆ ಪ್ರಮಾಣಕ್ಕೂ ಸಂಬಂಧ? ಈ ಒಂದು ಕಾರಣಕ್ಕೆ ನಡೆದು ಹೋಯಿತೇ ಈ ಘೋರ ದುರಂತ

Belagavi: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬರಗಟ್ಟಿ ಬಳಿ ನಡೆದಿದೆ. ಈ ವೇಳೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬೆನ್ನು ಮೂಳೆ ಮುರಿದೆ, ಮೆದುಳು ಬಾವು ಕಾಣಿಸಿದೆ ಎಂದು ವೈದ್ಯರು ಹೇಳಿದ್ದಾರೆ. ಈ ಬೆನ್ನಲ್ಲೇ ಈ ಕಾರು ಅಪಘಾತಕ್ಕೂ, ಧರ್ಮಸ್ಥಳದ ಆನೆ ಪ್ರಮಾಣ ವಿಚಾರಕ್ಕೂ ಸಂಬಂಧವಿದೆಯೇ? ಎಂಬ ಪ್ರಶ್ನೆ ಶುರುವಾಗಿದೆ.
ಹೌದು, ಇತ್ತೀಚಿಗೆ ನಡೆದ ಚಳಿಗಾಲದ ವಿಧಾನಸಭಾ ಅಧಿವೇಶನದಲ್ಲಿ ವಿಧಾನ ಪರಿಷತ್ ಕಲಾಪದ ವೇಳೆ ಬಿಜೆಪಿ ಸದಸ್ಯ ಸಿಟಿ ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅಶ್ಲೀಲ ಪದ ಪ್ರಯೋಗ ಮಾಡಿದ್ದಾರೆ ಎಂಬ ಆರೋಪ ರಾಜ್ಯಾದ್ಯಂತ ಸದ್ದು ಮಾಡಿತ್ತು. ಇದು ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ವಾಕ್ ಸಮರಕ್ಕೆ ಕಾರಣವಾಗಿತ್ತು. ಈ ಸಂದರ್ಭದಲ್ಲಿ ಸಿಟಿ ರವಿ ಅವರ ಬಂಧನ ಆಗಿ ನಂತರ ಅವರು ಜಾಮೀನಿನ ಮೇಲೆ ಹೊರಬಂದದ್ದು ಆಯಿತು. ಬಳಿಕ ಸಿಟಿ ರವಿ ಅವರು ನಾನು ಆ ರೀತಿ ಪದವನ್ನು ಪ್ರಯೋಗ ಮಾಡಿಲ್ಲ ಎಂದು ಎಲ್ಲೆಡೆ ಹೇಳಿಕೊಂಡು ಬರುತ್ತಿದ್ದರು. ಆಗ ಲಕ್ಷ್ಮಿ ಹೆಬ್ಬಾಳ್ಕರ್ ಅವರು ನೀವು ಆ ರೀತಿ ಅಶ್ಲೀಲ ಪದ ಬಳಸಿಲ್ಲ ಎಂದಾದರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಿ ಎಂದು ತಾಕೀತು ಮಾಡಿದ್ದರು. ಈ ವಿಚಾರವೇ ಇದೀಗ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕಾರು ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ.
ರಾಜಕೀಯ ವಿಚಾರಗಳಿಗೆ ಕ್ಷುಲ್ಲಕ ವಿಚಾರಗಳಿಗೆ ಇಲ್ಲಸಲ್ಲದ ವಿಚಾರಗಳಿಗೆ ಧರ್ಮಸ್ಥಳದ ಮಂಜುನಾಥ ಸ್ವಾಮಿ ಹಾಗೂ ಅಣ್ಣಪ್ಪ ಸ್ವಾಮಿಯನ್ನು ಎಳೆದು ತರಬಾರದು ಎಂದು ಭಕ್ತಾದಿಗಳು ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಕೂಡ ತಿಳಿದು ತಿಳಿದು ತಪ್ಪು ಮಾಡಿದರೆ ಖಂಡಿತ ಶಿಕ್ಷೆ ಆಗೇ ಆಗುತ್ತದೆ ಎಂದು ಹೇಳಿದ್ದರು. ಇದೀಗ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕಾರು ಅಪಘಾತ ಆಗಿರುವುದನ್ನು ಕೆಲವರು ಈ ವಿಚಾರಕ್ಕೆ ತಳುಕು ಹಾಕಿ, ರಾಜಕೀಯಕ್ಕೆ ಮಂಜುನಾಥ ಸ್ವಾಮಿಯನ್ನು ಎಳೆದು ತಂದ ಕಾರಣಕ್ಕೆ ಈ ಅಪಘಾತ ಆಗಿದೆ ಎಂದು ಸುದ್ದಿ ಮಾಡುತ್ತಿದ್ದಾರೆ.
Comments are closed.