Election : ರಾಜ್ಯದ ಜಿ. ಪಂ, ತಾ. ಪಂ ಚುನಾವಣೆಗೆ ಮುಹೂರ್ತ ಫಿಕ್ಸ್ – ಯಾವಾಗ?

Election: ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯ್ತಿ, ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವುದು ಬಾಕಿ ಇದೆ. ಈ ಚುನಾವಣೆಗೆ ಈಗ ಮುಹೂರ್ತ ಫಿಕ್ಸ್ ಆಗಿದೆ. ಜಿಲ್ಲಾ, ತಾಲ್ಲೂಕು ಪಂಚಾಯ್ತಿಗೆ ಏಪ್ರಿಲ್ ಒಳಗೆ, ಸ್ಥಳೀಯ ಸಂಸ್ಥೆಗಳಿಗೆ ಏಪ್ರಿಲ್, ಮೇ ಒಳಗೆ ಚುನಾವಣೆ ನಡೆಯೋದು ಖಚಿತವಾಗಿದೆ. ಈ ಕುರಿತು ರಾಜ್ಯ ಚುನಾವಣಾ ಆಯುಕ್ತರು ಮಾಹಿತಿ ನೀಡಿದ್ದಾರೆ.
ಹೌದು, ರಾಜ್ಯ ಚುನಾವಣಾ ಆಯುಕ್ತ ಸಂಗ್ರೇಶಿ ಅವರು ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿ, ಜಿಲ್ಲಾ ಪುನರ್ ವಿಂಗಡಣಾ ಆಯೋಗದ ವರದಿ ದೊರೆಯುವುದು ಹಾಗೂ ಇನ್ನಿತರ ಕಾರಣಗಳಿಂದಾಗಿ ಚುನಾವಣೆಗೆ ಈಗಾಗಲೇ ಸಾಕಷ್ಟು ವಿಳಂಬವಾಗಿದೆ. ಹಾಗಾಗಿ, ಶೀಘ್ರವೇ ಚುನಾವಣೆ ನಡೆಸಲಾಗುವುದು. ಸಂಬಂಧಪಟ್ಟ ಇಲಾಖೆಗಳಿಗೆ ಮೀಸಲಾತಿ ಪಟ್ಟಿಗಳನ್ನು ಕೊಡಲು ತಿಳಿಸಲಾಗಿದೆ. ಅವು ಸಿಕ್ಕ ಕೂಡಲೇ ಚುನಾವಣಾ ವೇಳಾ ಪಟ್ಟಿ ಪ್ರಕಟಿಸಲಿದ್ದೇವೆ ಎಂದರು.
ಅಲ್ಲದೆ ಏಪ್ರಿಲ್ ಒಳಗೆ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯ್ತಿ ಚುನಾವಣೆ ನಡೆಯುತ್ತದೆ. ಏಪ್ರಿಲ್, ಮೇ ಒಳಗೆ ರಾಜ್ಯದ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ನಿರ್ಧರಿಸಿರುವುದಾಗಿ ತಿಳಿಸಿದರು.
Comments are closed.