High Court : ಮಹಿಳೆಯರ ಫಸ್ಟ್ ನೈಟ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆ- ಮತ್ತೆ ವಿವಾದದ ಸುಳಿಯಲ್ಲಿ ಸಿಲುಕಿದ ಹೈಕೋರ್ಟ್ ನ್ಯಾಯಮೂರ್ತಿ ಶ್ರೀಶಾನಂದ!! ವಿಡಿಯೋ ವೈರಲ್
High Court : ಹೈಕೋರ್ಟ್ ನ ನ್ಯಾಯಮೂರ್ತಿ ಶ್ರೀಶಾನಂದ( High Court judge Srishananda) ಅವರ ಮಾತುಗಳನ್ನು ಕೇಳಲು ನಾಡಿನ ಜನರು ಕಾತರರಾಗಿ ಕುಳಿತಿರುತ್ತಾರೆ. ಕೇವಲ ತೀರ್ಪನ್ನು ಮಾತ್ರ ನೀಡದೆ ಅನೇಕ ಕಥೆಗಳ ಮೂಲಕ, ಹಲವು ನಿದರ್ಶನಗಳ ಮೂಲಕ ಜನರ ಕಣ್ಣು ತೆರೆಸುವ ಈ ನ್ಯಾಯಮೂರ್ತಿಗಳೆಂದರೆ, ಅವರ ಮಾತುಗಳೆಂದರೆ ಕರ್ನಾಟಕದ ಜನತೆಗೆ ಬಲು ಅಚ್ಚು ಮೆಚ್ಚು. ಸೋಶಿಯಲ್ ಮೀಡಿಯಾದಲ್ಲಿ ಇವರ ಮಾತುಗಳ ವಿಡಿಯೋ ತುಣುಕುಗಳು ಸಾಕಷ್ಟು ವೈರಲಾಗುತ್ತವೆ. ಅನೇಕರು ಅದನ್ನು ಸ್ಟೇಟಸ್ಗೆ ಹಾಕಿ ಮೆಚ್ಚುಗೆ ವ್ಯಕ್ತಪಡಿಸುತ್ತಾರೆ. ಆದರೆ ಏಕೋ ಏನೋ ತಿಳಿಯದು, ಈ ನ್ಯಾಯಮೂರ್ತಿಗಳು ಇತ್ತೀಚಿಗೆ ತಮ್ಮ ಮಾತಿನ ಬರದಲ್ಲಿ ವಿವಾದದ ಸುಳಿಯಲ್ಲಿ ಸಿಲುಕುತ್ತಿದ್ದಾರೆ.
ಹೌದು, ಇತ್ತೀಚಿಗಷ್ಟೇ ನ್ಯಾಯಾಲಯದ ಕಲಾಪದ ವೇಳೆ ಆಕ್ಷೇಪಾರ್ಹವಾದ ಹೇಳಿಕೆಗಳನ್ನು ನೀಡಿ ಸಾರ್ವಜನಿಕ ಆಕ್ರೋಶ ಎದುರಿಸಿದ್ದ ಹೈಕೋರ್ಟ್ ನ್ಯಾಯಮೂರ್ತಿ ವಿ.ಶ್ರೀಶಾನಂದ ಅವರು ಮತ್ತೆ ಅಂಥದ್ದೇ ವಿಚಾರಕ್ಕೆ ಚರ್ಚೆಯಾಗುತ್ತಿದ್ದಾರೆ. ಇದೀಗ ನ್ಯಾಯಮೂರ್ತಿ ವಿ.ಶ್ರೀಶಾನಂದ ಅವರ ಕಲಾಪದ ಹಳೆಯ ವಿಡಿಯೋವೊಂದು ವೈರಲ್ ಆಗಿದ್ದು, ಮದುವೆಗೆ ಸಂಬಂಧಿಸಿದಂತೆ ಅವರು ಆಡಿರುವ ಮಾತುಗಳ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ. ಅಲ್ಲದೆ, ಈ ಸಂಬಂಧ ಕೆಲವೆಡೆ ಪ್ರತಿಭಟನೆಗೂ ಕಾರಣವಾಗಿದೆ.
Is this man fit to b a judge ? He claims , falsely , that all women of a particular village go to the leader on getting married on” fist night” they are then “ second hand” The same judge who apologised to the SC for his obscene and anti secular comments i @TheLeaflet_in pic.twitter.com/hRQ86YA0WZ
— Indira Jaising (@IJaising) January 15, 2025
ನ್ಯಾಯಮೂರ್ತಿಗಳು ಹೇಳಿದ್ದೇನು?
ನ್ಯಾಯಾಲಯದಲ್ಲಿ ಪ್ರಕರಣವೊಂದರ ವಿಚಾರಣೆ ವೇಳೆ “ಹಳೆಯ ಶಿಲಾಯುಗದ ಕಾಲದಲ್ಲಿ ಹೆಣ್ಣಿಗೋಸ್ಕರ ಕಾದಾಟಗಳು ನಡೆದಿದ್ದು, ಹಲವು ಗಂಡಸರ ಹೆಣಗಳು ಬೀಳುತ್ತಿದ್ದವು. ಯಾರಿಗೆ ಶಕ್ತಿ ಇತ್ತೋ ಅವನು ನಾಯಕನಾಗುತ್ತಿದ್ದ. ಆ ನಾಯಕನಿಗೆ ಆ ಹೆಣ್ಣನ್ನು ಒಪ್ಪಿಸಿ, ಉಳಿದವರು ಹೆಣ್ಣನ್ನು ಉಪಯೋಗಿಸಿಕೊಳ್ಳಬೇಕಿತ್ತು. ನಿಮಗೆ ಗೊತ್ತಿರಲಿ, ಈ ದುಷ್ಟ ಆಚರಣೆ ಈಗಲೂ ಸುರಪುರದಲ್ಲಿದೆ. ಯಾರನ್ನು ಬೇಕಾದರೂ ನೀವು ಮದುವೆ ಮಾಡಿಕೊಳ್ಳಬಹುದು. ಆದರೆ, ಮೊದಲ ರಾತ್ರಿ ಮಾತ್ರ ನಾಯಕ ಜೊತೆ ಎಂದಿದೆ. ಆಮೇಲೆ ಅಲ್ಲೇ ಇರಬಹುದು ಅಥವಾ ಊರು ಬಿಟ್ಟು ಬೇರೆ ಕಡೆ ಹೋಗಿ ಮದುವೆ ಮಾಡಿಕೊಳ್ಳಬಹುದು. ಅದೆಲ್ಲವೂ ಸಾಧ್ಯವಾ? ಎಂದು ನೀವು ಕೇಳಿದರೆ, ಆ ತರಹ ಈಗಲೂ ನಡೆಯುತ್ತಿದೆ. ಅದರ ಮೇಲೆ ಬೇಕಾದಷ್ಟು ಚಲನಚಿತ್ರಗಳು ಬಂದಿವೆ. ಬೆತ್ತಲೆ ಸೇವೆ ಎಂದು ಸಿನಿಮಾ ಬಂದಿದೆ. ಇನ್ನೊಂದು, ಮತ್ತೊಂದು ಬಂತು ಎಲ್ಲವೂ ಆಯ್ತು. ಸರಿಹೋಯ್ತ ಎಂದು ನೋಡಿದರೆ ಇನ್ನೂ ಸರಿ ಹೋಗಲಿಲ್ಲ. ದೇವದಾಸಿಯರು ಎಂದರೆ ಏನು? ಎಲ್ಲ ಬೇಕಾದಷ್ಟು ಮಾಡಿಕೊಂಡರು. ಅದು ಇರಲಿ. ನಾವು ಆ ವಿಚಾರದ ಮೇಲಿಲ್ಲ” ಎಂದು ಹೇಳಿದ್ದಾರೆ.
ನ್ಯಾಯಮೂರ್ತಿಗಳ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಆಕ್ರೋಶ, ಪ್ರತಿಭಟನೆಗಳಿಗೆ ಕಾರಣವಾಗಿದೆ. ಅಲ್ಲದೆ ಈ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿರುವ ಯಾದಗಿರಿಯ ಸುರಪುರ ತಾಲ್ಲೂಕಿನ ಜ.13ರಂದು ಮಹರ್ಷಿ ವಾಲ್ಮೀಕಿ ನಾಯಕ ಸಂಘ ಮತ್ತು ಸಾಮೂಹಿಕ ಸಂಘಟನೆಗಳ ಒಕ್ಕೂಟವು ಬಂದ್ ಆಚರಿಸಿ ಶ್ರೀಶಾನಂದ ಅವರ ವಿರುದ್ದ ಆಕ್ರೋಶ ವ್ಯಕ್ತಪಡಿಸಿವೆ. ಅಲ್ಲದೆ, ನ್ಯಾ. ಶ್ರೀಶಾನಂದ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿ, ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ, ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದೆ.
Comments are closed.