ಸುಳ್ಯ : ಎಲಿಮಲೆ ಸಮೀಪ ಪತ್ನಿಯನ್ನು ಗುಂಡಿಟ್ಟು ಹತ್ಯೆಗೈದು ಪತಿ ಆತ್ಮಹತ್ಯೆ!

ಸುಳ್ಯ : ತಾಲೂಕಿನ ನೆಲ್ಲೂರು ಕೆಮ್ರಾಜೆಯ ಕೋಡಿಮಜಲುನಲ್ಲಿ ಪತ್ನಿಯನ್ನು ಗುಂಡಿಕ್ಕಿ ಕೊಂದು ಪತಿ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.17ರ ರಾತ್ರಿ ಸಂಭವಿಸಿದೆ.
ನೆಲ್ಲೂರು ಕೆಮ್ರಾಜೆ ಗ್ರಾಮದ ಕೋಡಿಮಜಲು ನಿವಾಸಿ ರಾಮಚಂದ್ರ ಎಂಬಾತ ತನ್ನ ಪತ್ನಿ ವಿನೋದ ಎಂಬವರನ್ನು ಗುಂಡಿಕ್ಕಿ ಕೊಲೆಗೈದಿದ್ದಾರೆ. ನಂತರ ತಾನು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ.
ವಿನೋದವರಿಗೆ 43 ವರ್ಷವಾಗಿದ್ದು, ರಾಮಚಂದ್ರಗೆ 54 ವರ್ಷ ವಯಸ್ಸಾಗಿತ್ತು.
ಕೌಟುಂಬಿಕ ಕಲಹವೇ ಕೃತ್ಯಕ್ಕೆ ಕಾರಣ ಎಂದು ಶಂಕಿಸಲಾಗಿದೆ.
Comments are closed.