Mangaluru : ಉಳ್ಳಾಲ ಬ್ಯಾಂಕ್ ದರೋಡೆ ಪ್ರಕರಣ – ದರೋಡೆಕೊರನ ಫೋಟೋ ವೈರಲ್!!

Mangaluru : ಮಂಗಳೂರಿನಲ್ಲಿ ನಿನ್ನೆ ದಿನ ಹಾಡ ಹಗಲೇ ಬ್ಯಾಂಕ್ ದರೋಡೆ ಮಾಡಲಾಗಿದ್ದು ಬ್ಯಾಂಕ್ ಸಿಬ್ಬಂದಿಗೆ ​ಬಂದೂಕು ತೋರಿಸಿದ ಆಗಂತುಕರು ದರೋಡೆ ನಡೆಸಿ ಪರಾರಿಯಾಗಿದ್ದಾರೆ. ಈ ಕುರಿತು ತನಿಖೆ ನಡೆಯುತ್ತಿದೆ. ಈ ಬೆನ್ನಲ್ಲೇ ದರೋಡೆಕೋರನೊಬ್ಬನ ಫೋಟೋ ವೈರಲ್ ಆಗಿದೆ.

 

ಹೌದು, ದಕ್ಷಿಣ ಕನ್ನಡ(Dakshina Kannada)ಜಿಲ್ಲೆಯ ಉಳ್ಳಾಲ ತಾಲ್ಲೂಕಿನ ಕೋಟೆಕಾರು ಬ್ಯಾಂಕ್ ಕೆ ಸಿ ರೋಡ್‌ ಶಾಖೆಗೆ ನೀಲಿ ಫಿಯಟ್ ಕಾರಿನಲ್ಲಿ ಆಗಮಿಸಿದ ಐವರು ಖದೀಮರ ತಂಡ ಭಾರೀ ದರೋಡೆ ನಡೆಸಿ ಎಸ್ಕೇಪ್ ಆಗಿದ್ದಾರೆ. ದರೋಡೆಕೋರರು ಬಂದೂಕು ತೋರಿಸಿ ಹಣ ದೋಚಿದ್ದು, ಈ ವೇಳೆ 12 ಕೋಟಿಗೂ ಅಧಿಕ ಹಣ ದರೋಡೆ ಮಾಡಿದ್ದಾರೆ. ನಾಲ್ಕೈದು ಚೀಲದಲ್ಲಿ ಹಣ ತುಂಬಿಸಿ ದರೋಡೆ ಮಾಡಲಾಗಿದೆ ಎನ್ನಲಾಗಿದ್ದು, ಪಕ್ಕಾ ಪ್ಲ್ಯಾನ್ ಮಾಡಿ ದರೋಡೆಕೋರರು ದಾಳಿ ಮಾಡಿದ್ದಾರೆ ಎನ್ನಲಾಗಿದೆ. ಈ ಬೆನ್ನಲ್ಲೇ ಫಿಯೆಟ್ ಕಾರಿನಲ್ಲಿ ದರೋಡೆಕೋರರು ಉಡುಪಿಯ ಟೋಲ್ ಗೇಟ್ ಬಳಿ ಟೋಲ್ ಶುಲ್ಕ ಕಟ್ಟುತ್ತಿದ್ದಾಗ ಓರ್ವ ದರೋಡೆಕೋರನ ಫೋಟೋ ಒಂದು ಇದೀಗ ವೈರಲಾಗಿದೆ.

ಅಂದಾಹಾಗೆ ಬ್ಯಾಂಕಿಗೆ ನುಗ್ಗಿದ ದರೋಡೆಕೋರರು, ಬ್ಯಾಂಕ್ ಸಿಬ್ಬಂದಿಗಳಿಗೆ ಬಂದೂಕು ತೋರಿಸಿ ಬೆದರಿಕೆಯೊಡ್ಡಿ ಹಣ, ಚಿನ್ನಾಭರಣ ಸೇರಿ ಒಟ್ಟು 12 ಕೋಟಿ ರೂಪಾಯಿ ದೋಚಿದ್ದಾರೆ. ಬಳಿಕ ಅಲ್ಲಿಂದ ಅವರು ನೇರವಾಗಿ ಕೇರಳಕ್ಕೆ ತೆರಳಿ ಅಲ್ಲಿಂದ ಅಜ್ಞಾತ ಸ್ಥಳದಿಂದ ತಮಿಳುನಾಡಿನ ಕಡೆ ಬೋಟ್ನಲ್ಲಿ ಹೋಗುತ್ತಿರುವ ಶಂಕೆ ವ್ಯಕ್ತವಾಗಿದೆ. ಇನ್ನು ದರೋಡೆ ಬಳಿಕ ದುಷ್ಕರ್ಮಿಗಳು ಉಡುಪಿಯ ಮಾರ್ಗವಾಗಿ ಕೇರಳಕ್ಕೆ ತೆರಳಿರುವ ಶಂಕೆ ವ್ಯಕ್ತವಾಗುತ್ತಿದೆ. ಈ ವೇಳೆ ಉಡುಪಿಯ ಬಳಿ ಟೋಲ್ ಗೇಟ್ ಬಳಿ ಕಾರು ಚಾಲನೆ ಮಾಡುತ್ತಿದ್ದ ದರೋಡೆಕೋರನೊಬ್ಬ ಮಾಸ್ಕನ್ನು ತೆಗೆದು ಟೋಲ್ ಶುಲ್ಕ ಕಟ್ಟುತ್ತಿರುವ ಫೋಟೋ ಇದೀಗ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

Comments are closed.