Dharmasthala : ಅತ್ಯಾಚಾರಕ್ಕೆ ಒಳಗಾಗಿ ಸಾವಿಗೀಡಾಗಿದ್ದ ಸೌಜನ್ಯಳ ತಂದೆ ಚಂದ್ರಪ್ಪ ಗೌಡ ನಿಧನ!!

Dharmasthala : ಸುಮಾರು 12 ವರ್ಷಗಳ ಹಿಂದೆ ಧರ್ಮಸ್ಥಳದ ನೇತ್ರಾವತಿ ಹೊಳೆಯ ಬಳಿ ಕಾಡಿನಲ್ಲಿ ಅತ್ಯಾಚಾರಕ್ಕೆ ಒಳಗಾಗಿ ಸಾವನ್ನಪ್ಪಿದ್ದ ಸೌಜನ್ಯ ಅವರ ತಂದೆ ಇಂದು ನಿಧನರಾಗಿದ್ದಾರೆ.

 

ಬೆಳ್ತಂಗಡಿ ತಾಲೂಕು ಧರ್ಮಸ್ಥಳ(Dharmasthala) ಗ್ರಾಮದ ಪಾಂಗಾಳ ನಿವಾಸಿ ಚಂದಪ್ಪ ಗೌಡ (58)ರವರು ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಇವರು ಹನ್ನೆರಡು ವರ್ಷಗಳ ಹಿಂದೆ ಧರ್ಮಸ್ಥಳದ ನೇತ್ರಾವತಿ ಸ್ನಾನ ಘಟ್ಟದ ಬಳಿಯ ಕಾಡಂಚಿನಲ್ಲಿ ಅತ್ಯಾಚಾರಕ್ಕೊಳಗಾಗಿ ಭೀಕರವಾಗಿ ಹತ್ಯೆಯಾಗಿ, ಇಂದು ನಾಡಿನ ಜನರ ಮಗಳಾಗಿರುವ

ಕುಮಾರಿ ಸೌಜನ್ಯ ಅವರ ತಂದೆ.

 

ವೃತ್ತಿಯಲ್ಲಿ ಗುತ್ತಿಗೆದಾರರಾಗಿದ್ದ ಚಂದಪ್ಪ ಗೌಡರವರು ಕಳೆದ ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಎರಡು ದಿನಗಳ ಹಿಂದೆ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆಗೆ ಸ್ಪಂದಿಸದೆ ನಿಧನ ಹೊಂದಿದ್ದಾರೆ.

ಅಂದಹಾಗೆ 2012ರ ನವೆಂಬರ್ 6ರಂದು ಸಿಐಡಿ ತನಿಖೆಯನ್ನು ಸಿಬಿಐಗೆ ವರ್ಗಾಯಿಸಿ ಸರ್ಕಾರ ಆದೇಶಿಸಿತ್ತು. ಸಿಬಿಐ, ಕಾರ್ಕಳದ ಸಂತೋಷ್ ರಾವ್ ಆರೋಪಿ ಎಂದು ಗುರುತಿಸಿತ್ತು. 2023ರ ಜುಲೈ 16ರಂದು ಸಿಬಿಐ ವಿಶೇಷ ನ್ಯಾಯಾಲಯ ಸಂತೋಷ್‌ ರಾವ್‌ ಖುಲಾಸೆಗೊಳಿಸಿತ್ತು. ಈ ಮಧ್ಯೆ ಅವರ ಕುಟುಂಬಸ್ಥರು ನ್ಯಾಯಕ್ಕಾಗಿ ತೀವ್ರ ಹೋರಾಟ ನಡೆಸುತ್ತಲೇ ಇದ್ದರು. ಈಗ ಸೌಜನ್ಯಳ ತಂದೆ ದೈವಾಧೀನರಾಗಿದ್ದು ಕುಟುಂಬಕ್ಕೆ ದೊಡ್ಡ ಅಘಾತ ಉಂಟುಮಾಡಿದೆ.

Comments are closed.