Ramanagara: ಮುಂದಿನ ತಿಂಗಳು ಮದುವೆ ನಿಗದಿಯಾಗಿದ್ದ ನರೇಗಾ ಇಂಜಿನಿಯರ್ ರಸ್ತೆ ಅಪಘಾತದಲ್ಲಿ ಸಾವು!

Ramanagara: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮಹಿಳಾ ಇಂಜಿನಿಯರೋರ್ವರು ಸಾವಿಗೀಡಾದ ಘಟನೆಯೊಂದು ನಡೆದಿದೆ. ರಾಮನಗರದ ಹಲಗೂರು ಸಮೀಪದ ಬಸಾಪುರ ಗೇಟ್‌ ಬಳಿ ಈ ಘಟನೆ ನಡೆದಿದೆ. ಶರಣ್ಯ ಗೌಡ (25) ಮೃತ ಪಟ್ಟ ಇಂಜಿ ಇಂಜಿನಿಯರ್‌. ಇವರು ಮಂಡ್ಯದ ಮಳವಳ್ಳಿ ತಾಲೂಕಿನ ಬಳೆಹೊನ್ನಿಗನ ಗ್ರಾಮದವರು. ಮುಂದಿನ ತಿಂಗಳು ಫೆ.16 ರಂದು ಶರಣ್ಯ ಮದುವೆ ನಿಶ್ಚಯವಾಗಿತ್ತು.

ಕಳೆದ ಒಂದು ವರ್ಷದಿಂದ ಕನಕಪುರ ತಾಲೂಕಿನ ಸಾತನೂರು ಪಂಚಾಯಿತಿಯಲ್ಲಿ ನರೇಗಾ ಇಂಜಿನಿಯರ್‌ ಆಗಿ ಕೆಲಸ ಮಾಡುತ್ತಿದ್ದರು. ಇವರು ತಮ್ಮ ಕರ್ತವ್ಯ ಮುಗಿಸಿ ಸ್ವಗ್ರಾಮ ಬಳೆಹೊನ್ನಿಗನಕ್ಕೆ ಬೈಕ್‌ನಲ್ಲಿ ಹಲಗೂರಿಗೆ ಹೋಗುವ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ.

ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದು, ಭಯಾನಕವಾಗಿ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರಕ್ಕೆ ಶರಣ್ಯ ಅವರಿಗೆ ತೀವ್ರ ರಕ್ತಸ್ರಾವ ಉಂಟಾಗಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಈ ಅಪಘಾತ ಸಂಬಂಧ ಹಲಗೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Comments are closed.