Ullala: ಕೋಟೆಕಾರ್ ಬ್ಯಾಂಕ್ ದರೋಡೆ ಪ್ರಕರಣ – 3 ಆರೋಪಿಗಳ ಬಂಧನ!!

Ullala: ಮಂಗಳೂರಿನಲ್ಲಿ ಮಠ ಮಠ ಮಧ್ಯಾಹ್ನದ ವೇಳೆ ಕೋಟೆಕಾರ್ ಸಹಕಾರಿ ಬ್ಯಾಂಕ್ ನಲ್ಲಿ ಬರೋಬ್ಬರಿ 15 ಕೋಟಿ ಮೌಲ್ಯದ ಚಿನ್ನ ಮತ್ತು ಹಣವನ್ನು ದರೋಡೆ ಮಾಡಲಾದ ಪ್ರಕರಣ ರಾಜ್ಯದ್ಯಂತ ಸಂಚಲನ ಸೃಷ್ಟಿಸಿತ್ತು. ಇದೀಗ ಈ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಸೋಮವಾರ ಮೂವರನ್ನು ಬಂಧಿಸಿದ್ದಾರೆ.
ಹೌದು, ಮಧ್ಯಾಹ್ನದ ವೇಳೆ ರಾಜ ರೋಷವಾಗಿ ಬ್ಯಾಂಕಿಗೆ ನುಗ್ಗಿ, ಸುಮಾರು 15 ಕೋಟಿಗೂ ಹೆಚ್ಚು ಮೌಲ್ಯದ ನಗದು ಕದ್ದು ಪರಾರಿಯಾಗಿದ್ದು ಪೊಲೀಸರಿಗೆ ದೊಡ್ಡ ತಲೆನೋವಾಗಿತ್ತು. ಇದೀಗ ಈ ಪ್ರಕಾರಣಕ್ಕೆ ಸಂಬಂಧಸಿದಂತೆ ಆರೋಪಿಗಳನ್ನು ಮಂಗಳೂರು ಪೊಲೀಸರು ಇಂದು ಮಧುರೈ ಸಮೀಪ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರು ಆರೋಪಿಗಳನ್ನು ಮುರುಗನ್, ಪ್ರಕಾಶ್ ಅಲಿಯಾಸ್ ಜೈಸ್ವಾ ಹಾಗೂ ಮಣಿವಣ್ಣನ್ ಎಂದು ಗುರುತಿಸಲಾಗಿದೆ.
ಇನ್ನು ಈ ಆರೋಪಿಗಳಿಂದ 2 ಗೋಣಿಚೀಲ, ತಲ್ವಾರ್, 2 ಪಿಸ್ತೂಲ್ ಜಪ್ತಿ ಮಾಡಿದ್ದೇವೆ. ಬಂಧಿತ ಆರೋಪಿಗಳು ತಮಿಳುನಾಡಿನ ತಿರುನೆಲ್ವೇಲಿ ಮೂಲದವರು ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರು ಮಾಹಿತಿ ನೀಡಿದ್ದಾರೆ.
Comments are closed.