High Court : ಡಾ. ವೀರೇಂದ್ರ ಹೆಗ್ಗಡೆ ವಿರುದ್ಧ ಹೇಳಿಕೆ ನೀಡದಂತೆ ತಿಮರೋಡಿಗೆ ಹೈಕೋರ್ಟ್ ಖಡಕ್ ಸೂಚನೆ !! ಮತ್ತೆ ನೀಡಿದ್ದಲ್ಲಿ ಕಾನೂನು ಕ್ರಮದ ಎಚ್ಚರಿಕೆ

High Court : ಧರ್ಮಸ್ಥಳದಲ್ಲಿ ಸುಮಾರು 12 ವರ್ಷಗಳ ಹಿಂದೆ ಅತ್ಯಾಚಾರಕ್ಕೆ ಒಳಗಾದ ಸೌಜನ್ಯಗಳಿಗಾಗಿ ನ್ಯಾಯ ಒದಗಿಸಲುಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರು ಹೋರಾಟ ನಡೆಸುತ್ತಿದ್ದಾರೆ. ಈ ವೇಳೆ ಅವರು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರ ಮೇಲೆ ಆರೋಪ ಮಾಡುತ್ತಾ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿದ್ದರು. ಆದರೆ ಈಗ ಹೈಕೋರ್ಟ್ ತಿಮ್ಮರೋಡಿ ಅವರಿಗೆ ವೀರೇಂದ್ರ ಹೆಗ್ಡೆ ವಿರುದ್ಧ ಯಾವುದೇ ಅವಹೇಳನಕಾರಿ ಹಾಗೂ ಮಾನಹಾನಿ ಹೇಳಿಕೆಗಳನ್ನ ನೀಡದಂತೆ ಮಾನ್ಯ ಕರ್ನಾಟಕ ಹೈಕೋರ್ಟ್ ಖಡಕ್ ಎಚ್ಚರಿಕೆ ನೀಡಿದೆ.
ಹೌದು, ಸಾರ್ವಜನಿಕ ಸಭೆಗಳಲ್ಲಿ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಡಾ. ವೀರೇಂದ್ರ ಹೆಗ್ಡೆ ವಿರುದ್ಧ ಯಾವುದೇ ಅವಹೇಳನಕಾರಿ ಹಾಗೂ ಮಾನಹಾನಿ ಹೇಳಿಕೆಗಳನ್ನ ನೀಡದಂತೆ ಮಾನ್ಯ ಕರ್ನಾಟಕ ಹೈಕೋರ್ಟ್ ಖಡಕ್ ಎಚ್ಚರಿಕೆ ನೀಡಿದೆ. ಡಿ. ವೀರೇಂದ್ರ ಹೆಗ್ಗಡೆ, ಅವರ ಕುಟುಂಬ ಧರ್ಮಸ್ಥಳಕ್ಕೆ ಸಂಬಂಧಿಸಿದ ಸಂಸ್ಥೆಗಳು ಹಾಗೂ ಮುಂದಿನ ಯೋಜನೆಗಳ ಬಗ್ಗೆ ಯಾವುದೇ ಅಪಪ್ರಚಾರ ಅಥವಾ ಮಾನಹಾನಿ ಹೇಳಿಕೆಗಳನ್ನು ನೀಡದಂತೆ ನ್ಯಾ. ಆರ್. ದೇವದಾಸ್ ಅವರಿದ್ದ ಏಕ ಸದಸ್ಯ ಪೀಠ ಮಹತ್ವದ ಆದೇಶ ಆದೇಶಿಸಿದೆ.
ಅಂದಹಾಗೆ ತಿಮರೋಡಿ ಬೇಷರತ್ ಕ್ಷಮೆ ಕೋರಿ ಅಫಿಡವಿಟ್ ಸಲ್ಲಿಸಿದ್ದರೂ ಕೂಡಾ ನಂತರ ಬಹಿರಂಗ ಹೇಳಿಕೆಗಳನ್ನು ನೀಡುತ್ತಲೇ ಬಂದಿದ್ದಾರೆ. ಮತ್ತೊಂದು ಬಾರಿ ತಿಮರೋಡಿ ಹಾಗೂ ಅವರ ಬಳಗ ಸಾರ್ವಜನಿಕ ಸಮಾರಂಭ, ಜಾಲತಾಣದಲ್ಲಿ ಧರ್ಮಸ್ಥಳ, ಧರ್ಮಾಧಿಕಾರಿಗಳ ಕುಟುಂಬ, ಧರ್ಮಾಧಿಕಾರಿಗಳ ವಿರುದ್ಧ ಅಪಪ್ರಚಾರ, ಅವಹೇಳನಕಾರಿ ಹಾಗೂ ಮಾನಹಾನಿ ಹೇಳಿಕೆಗಳನ್ನು ನೀಡಿದ್ದಲ್ಲಿ ತತ್ತಕ್ಷಣ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಕೋರ್ಟ್ ಖಡಕ್ ಸೂಚನೆ ನೀಡಿದೆ.
Comments are closed.