Second Puc Exam: ಶೇ.75ಕ್ಕಿಂತ ಕಡಿಮೆ ಹಾಜರಾತಿ ಇರುವ ವಿದ್ಯಾರ್ಥಿಗೆ ಪ್ರವೇಶ ಪತ್ರ ಇಲ್ಲ

Second Puc Exam: ಮಾ.1 ರಿಂದ 20 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1 ನಡೆಯಲಿದೆ. ಪರೀಕ್ಷಾ ವೇಳಾಪಟ್ಟಿ ಕೂಡಾ ಪ್ರಕಟವಾಗಿದೆ. ಇದೀಗ ಕೆಎಸ್‌ಇಎಬಿ (ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ) ಯು ದ್ವಿತೀಯ ಪಿಯುಸಿಯಲ್ಲಿ ಶೇ.75ಕ್ಕಿಂತ ಕಡಿಮೆ ಹಾಜರಾತಿ ಹೊಂದಿರುವ ವಿದ್ಯಾರ್ಥಿಗಳ ಮಾಹಿತಿ ನೀಡುವಂತೆ ಪಿಯು ಕಾಲೇಜುಗಳಿಗೆ ಸೂಚನೆ ನೀಡಿದೆ.
ಹಾಜರಾತಿ ಕಡಿಮೆ ಇರುವ ವಿದ್ಯಾರ್ಥಿಗಳಗೆ ಪ್ರವೇಶ ಪತ್ರ ನೀಡಲಾಗುವುದಿಲ್ಲ. ದ್ವಿತೀಯ ಪಿಯು ಪರೀಕ್ಷೆ ಬರೆಯಲು ಶೇ.75 ಕ್ಕಿಂತ ಹೆಚ್ಚಿನ ಹಾಜರಾತಿ ಇರುವುದು ಕಡ್ಡಾಯ. ಈ ಹಿನ್ನೆಲೆಯಲ್ಲಿ ಮಾಹಿತಿ ನೀಡಲು ಸೂಚನೆ ನೀಡಲಾಗಿದೆ.
Comments are closed.