Sunil Kumar : ನಾನೇಕೆ ರಾಜೀನಾಮೆ ನೀಡಿದೆ? ಅಚ್ಚರಿ ಕಾರಣ ಬಿಚ್ಚಿಟ್ಟ ಬಿಜೆಪಿ ಶಾಸಕ ಸುನಿಲ್ ಕುಮಾರ್ !!

Sunil Kumar : ಇತ್ತೀಚಿಗೆ ಬಿಜೆಪಿ ಶಾಸಕ ಹಾಗೂ ಬಿಜೆಪಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಸುನಿಲ್ ಕುಮಾರ್(Sunil Kumar)ಅವರು ದಿಡೀರ್ ಎಂದು ತಮ್ಮ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆಯನ್ನು ನೀಡಿದ್ದರು. ಈ ಬೆನ್ನಲ್ಲೇ ಸುನಿಲ್ ಕುಮಾರ್ ಅವರೇ ಬಿಜೆಪಿಯ ಮುಂದಿನ ರಾಜ್ಯಾಧ್ಯಕ್ಷರು ಎಂದು ಹೇಳಲಾಗಿತ್ತು. ಆದರೆ ಈಗ ಈ ಕುರಿತು ಸುನಿಲ್ ಕುಮಾರ್ ಅವರೇ ಪ್ರತಿಕ್ರಿಯೆ ನೀಡಿದ್ದಾರೆ.
ಹೌದು, ರಾಜ್ಯದಲ್ಲಿ ಬಿಜೆಪಿಯ ಒಳ ಜಗಳ ಜೋರಾಗಿದೆ. ಬಿವೈ ವಿಜಯೇಂದ್ರ ಮತ್ತು ಯತ್ನಾಳ್ ಬಣಗಳ ಕೋಪಾವೇಶ ತಾರಕಕ್ಕೇರಿದೆ. ಮಾಧ್ಯಮಗಳ ಮುಂದೆ ಬಿಜೆಪಿ ನಾಯಕರು ಬಾಯಿಗೆ ಬಂದಂತೆ ಬೈದಾಡಿಕೊಳ್ಳುತ್ತಿದ್ದಾರೆ. ಈ ಎಲ್ಲ ಬೆಳವಣಿಗೆಗಳ ನಡುವೆಯೇ ಶಾಸಕ ಸುನಿಲ್ ಕುಮಾರ್ ಅವರು ತಮ್ಮ ರಾಜ್ಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಇದುವರೆಗೂ ಅವರು ನಾನು ಯಾಕೆ ರಾಜೀನಾಮೆ ನೀಡಿದೆ ಎಂಬುದಾಗಿ ಸ್ಪಷ್ಟೀಕರಣ ನೀಡಿರಲಿಲ್ಲ. ಆದರೆ ಈಗ ಮೊದಲ ಬಾರಿಗೆ ಈ ಕುರಿತು ಪ್ರತಿಕ್ರಿಯಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಸುನೀಲ್ ಕುಮಾರ್ ಅವರು ತಾನು ಬಿಜೆಪಿ ರಾಜ್ಯಾಧ್ಯಕ್ಷನ ಸ್ಥಾನಕ್ಕೆ ಖಂಡಿತ ಆಕಾಂಕ್ಷಿಯಲ್ಲ. ಪ್ರಧಾನ ಕಾರ್ಯದರ್ಶಿಯ ಹುದ್ದೆಯನ್ನೇ ನಿಭಾಯಿಸಲು ಆಗುತ್ತಿಲ್ಲ. ನಿಭಾಯಿಸಲಾಗದ ಕಾರಣ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಹೇಳಿದ್ದಾರೆ.
ಅಲ್ಲದೆ ಬಿಜೆಪಿಯಲ್ಲಿ ರಾಜ್ಯ ಅಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯುತ್ತದೆ ಎಂಬ ಕುರಿತು ಪ್ರತಿಕ್ರಿಸಿದ ಅವರು ‘ಅಧ್ಯಕ್ಷನ ಆಯ್ಕೆಗೆ ಚುನಾವಣೆ ನಡೆಯಲ್ಲ, ಅದೊಂದು ಔಪಚಾರಿಕತೆ, ಸರ್ವಾನುಮತದಿಂದ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುತ್ತದೆ ಎಂದು ಹೇಳಿದರು.
Comments are closed.