Shivamogga: ಜಮೀನಿನಲ್ಲಿದ್ದ ವಿದ್ಯುತ್ ಪರಿವರ್ತಕ ವಿಚಾರದಲ್ಲಿ ಗಲಾಟೆ; ಓರ್ವನ ಕೊಲೆ

Shivamogga: ಜ.22 (ಬುಧವಾರ) ರಂದು ಜಮೀನಿನಲ್ಲಿದ್ದ ವಿದ್ಯುತ್ ಪರಿವರ್ತಕ ವಿಚಾರಕ್ಕೆ ದೊಡ್ಡ ಗಲಾಟೆಯೊಂದು ನಡೆದಿದ್ದು, ನಂತರ ಕೊಲೆಯಲ್ಲಿ ಅಂತ್ಯಗೊಂಡ ಘಟನೆಯೊಂದು ಭದ್ರಾವತಿಯ ದೊಡ್ಡೇರಿ ಗ್ರಾಮದಲ್ಲಿ ನಡೆದಿದೆ.
ಶಾಂತಕುಮಾರ (35 ವರ್ಷ) ಕೊಲೆಯಾದ ವ್ಯಕ್ತಿ. ಲೇಪಾಕ್ಷಿ ಹಾಗೂ ಇನ್ನೋರ್ವ ವ್ಯಕ್ತಿಯ ಮೇಲೆ ಕೊಲೆ ಆರೋಪವಿದೆ. ಜಮೀನಿನಲ್ಲಿದ್ದ ವಿದ್ಯುತ್ ಪರಿವರ್ತಕ ವಿಚಾರಕ್ಕೆ ಸಂಬಂಧಪಟ್ಟಂತೆ ಬುಧವಾರ ಸಂಜೆ ಗಲಾಟೆ ನಡೆದಿದ್ದು, ರಾತ್ರಿ ಮಚ್ಚಿನಿಂದ ಹಲ್ಲೆ ಮಾಡಿ ಇಬ್ಬರು ಆರೋಪಿಗಳು ಕೊಲೆ ಮಾಡಿದ್ದಾರೆ. ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧನ ಮಾಡಿದ್ದಾರೆ. ಈ ಕುರಿತು ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Comments are closed.