Puttur: ನೇಣು ಬಿಗಿದು ಇಲೆಕ್ಟ್ರಿಷಿಯನ್‌ ಆತ್ಮಹತ್ಯೆ

Share the Article

Puttur: ಪಡುವನ್ನೂರು ಗ್ರಾಮದ ಪುಂಡಿಕಾಯಿಯಲ್ಲಿ ಮರದ ಕೊಂಬೆಗೆ ನೇಣು ಬಿಗಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ನಡೆದಿದೆ.

ವಯರಿಂಗ್‌ ಕೆಲಸ ಮಾಡುತ್ತಿದ್ದ ಮೋಹನ್‌ (34 ವರ್ಷ) ಎಂಬುವವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಜ.20 ರಂದು ಮೋಹನ್‌ ಅವರು ರಾತ್ರಿ ಊಟ ಮಾಡಿ ಮಲಗಿದ್ದು, ಜ.21 ರ ಬೆಳಗ್ಗೆ ನಾಪತ್ತೆಯಾಗಿದ್ದರು. ಇವರು ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದು, ಇದಕ್ಕೆ ಚಿಕಿತ್ಸೆಯನ್ನೂ ಪಡೆಯುತ್ತಿದ್ದರು.

ನಾಪತ್ತೆ ವಿಷಯ ತಿಳಿದು ಹುಡುಕಾಟ ಮಾಡಿದಾಗ ಮನೆಯ ಪಕ್ಕದ ಪದ್ಮನಾಭ ಭಟ್‌ ಎಂಬುವವರ ಜಾಗದಲ್ಲಿ ಉಪ್ಪಳಿಗೆ ಮರದ ಕೊಂಬೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ. ಮೃತರ ಸಹೋದರ ಚಿರಂಜೀವಿ ನೀಡಿದ ದೂರಿನಂತೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.