Mangaluru : ಮಸಾಜ್ ಸೆಂಟರ್ ನಲ್ಲಿ ದಾಂಧಲೆ ಮಾಡಿದ ಪ್ರಕರಣ – ರಾಮ ಸೇನೆ ಸಂಸ್ಥಾಪಕ ಪ್ರಸಾದ್ ಅತ್ತಾವರ ಅರೆಸ್ಟ್!!

Share the Article

Mangaluru : ಮಂಗಳೂರಿನ ಬಿಜೈಯ ಮಸಾಜ್ ಸೆಂಟರ್‌ನಲ್ಲಿ ದಾಂಧಲೆ ನಡೆಸಿದ ಪ್ರಕರಣದ ಆರೋಪಿ ರಾಮಸೇನಾ ಸ್ಥಾಪಕ ಪ್ರಸಾದ್ ಅತ್ತಾವರನನ್ನು ಪೊಲೀಸರು ಬಂಧಿಸಿದ್ದಾರೆ. ಗೃಹ ಸಚಿವ ಪರಮೇಶ್ವರ ಅವರೇ ಆರೋಪಿಗಳ ಬಂಧನಕ್ಕೆ ಆಗ್ರಹಿಸಿದ್ದರು.

ನಗರದ ಮಸಾಜ್ ಸೆಂಟರ್ ಮೇಲೆ ರಾಮ ಸೇನಾ ಸಂಘಟನೆಯ ಕಾರ್ಯಕರ್ತರು ದಾಂಧಲೆ ನಡೆಸಿದ ಹಿನ್ನೆಲೆಯಲ್ಲಿ ಪ್ರಸಾದ್ ಅತ್ತಾವರನನ್ನು ಬಂಧಿಸಲಾಗಿದೆ. ಪ್ರಸಾದ್ ಅತ್ತವಾರ ಮಾಧ್ಯಮಗಳಿಗೆ ಹೇಳಿಕೆ ನೀಡುತ್ತಿರುವಾಗಲೇ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಇನ್ನು ತಮ್ಮ ಸಂಘಟನೆಯ ಕಾರ್ಯಕರ್ತರು ಮಸಾಜ್ ಸೆಂಟರ್‌ಗೆ ನುಗ್ಗಿರುವುದಾಗಿ ಪ್ರಸಾದ್ ಅತ್ತಾವರ ಒಪ್ಪಿಕೊಂಡಿರುವುದು ವರದಿಯಾಗಿದೆ. ಉಳಿದ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

Comments are closed.