Kiccha Sudeep : ರಾಜ್ಯದ ‘ಅತ್ಯುತ್ತಮ ನಟ’ ಪ್ರಶಸ್ತಿ ನಿರಾಕರಿಸಿದ ಕಿಚ್ಚ – ಇದರ ಹಿಂದಿದೆ ಈ ಒಂದು ನೋವಿನ ಕಥೆ?

Kiccha Sudeep : 2019ರಲ್ಲಿ ತೆರೆಕಂಡ ಸಿನಿಮಾಗಳಿಗೆ ಈಗ ರಾಜ್ಯ ಪ್ರಶಸ್ತಿ ಘೋಷಣೆ ಆಗಿದೆ. ಈ ಪಟ್ಟಿಯಲ್ಲಿ ಸುದೀಪ್ ಅವರಿಗೆ ‘ಪೈಲ್ವಾನ್’ ಚಿತ್ರದ ನಟನೆಗೆ ರಾಜ್ಯ ಸರ್ಕಾರ ‘ಅತ್ಯುತ್ತಮ ನಟ’ ಅವಾರ್ಡ್ ನೀಡಿ ಗೌರವಿಸಿದೆ. ಆದರೆ ಸುದೀಪ್ ಅವರು ಈ ಪ್ರಶಸ್ತಿಯನ್ನು ನಿರಾಕರಿಸಿದ್ದಾರೆ. ಸುದೀಪ್ ಅವರ ಈ ನಡೆ ಸಾಕಷ್ಟು ಕುತೂಹಲ ಮೂಡಿಸಿತ್ತು. ಆದರೆ ಈಗ ಸುದೀಪ್ ಅವರ ಈ ನಡೆಯ ಹಿಂದೆ ಆ ಒಂದು ಕಾರಣ ಇದೆ ಎಂದು ಹೇಳಲಾಗುತ್ತಿದೆ

ಹೌದು, ಸುದೀಪ್(Kiccha Sudeep)ಕೆಲ ವರ್ಷಗಳಿಂದ ಪ್ರಶಸ್ತಿಗಳನ್ನು ನಿರಾಕರಿಸುತ್ತಾ ಬಂದಿದ್ದಾರೆ. ಈ ನಿರಾಕರಣೆಯ ಹಿಂದೆ ಅದರದ್ದೇ ಆದ ನೋವಿದೆ. ಪ್ರಶಸ್ತಿಗಳನ್ನು ಸುದೀಪ್ ನಿರಾಕರಿಸಲು ಕಾರಣ ಅದೊಂದು ಘಟನೆ. 2004ರ ವೇಳೆ, ‘ರಂಗ ಎಸ್.ಎಸ್.ಎಲ್.ಸಿ’ ಮತ್ತು ‘ಮುಸ್ಸಂಜೆ ಮಾತು’ ಸಿನಿಮಾ ಮಾಡಿದಾಗ ಪ್ರಶಸ್ತಿ ಕಮಿಟಿಯಲ್ಲಿದ್ದವರೇ ಸುದೀಪ್‌ಗೆ ಕರೆ ಮಾಡಿ ನಿಮಗೆ ಅತ್ಯುತ್ತಮ ನಟ ಪ್ರಶಸ್ತಿ ಬಂದಿದೆ ಅಂತ ಹೇಳಿದ್ದರು. ಸಹಜವಾಗಿಯೇ ಸುದೀಪ್ ಸಂಭ್ರಮಿಸಿದ್ದರು. ಆದರೆ, ರಾಜ್ಯ ಪ್ರಶಸ್ತಿ ಘೋಷಣೆ ಆದಾಗ ಸುದೀಪ್ ಬದಲಿಗೆ ಅಲ್ಲಿ ಬೇರೆ ನಟರ ಹೆಸರಿತ್ತು. ಈ ಎರಡು ಘಟನೆಯಿಂದಾಗಿ ಅವರು ಪ್ರಶಸ್ತಿಗಳನ್ನು ನಿರಾಕರಿಸುತ್ತಲೇ ಬಂದಿದ್ದಾರೆ. ಕೆಲ ವರ್ಷಗಳಿಂದ ಅವರು ಪ್ರಶಸ್ತಿ ಸಮಾರಂಭಗಳಿಗೂ ಹೋಗುವುದನ್ನು ಕೂಡ ಸುದೀಪ್ ನಿಲ್ಲಿಸಿದ್ದಾರೆ.

ಇನ್ನು ಈ ಕುರಿತು ವೇಟ್ ಮಾಡಿರುವ ಸುದೀಪ್ ಅವರು ‘ಅತ್ಯುತ್ತಮ ನಟ ವಿಭಾಗದಲ್ಲಿ ರಾಜ್ಯ ಪ್ರಶಸ್ತಿಯನ್ನು ಪಡೆದಿರುವುದು ನಿಜಕ್ಕೂ ಒಂದು ಸೌಭಾಗ್ಯ. ಗೌರವಾನ್ವಿತ ತೀರ್ಪುಗಾರರಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು. ನಾನು ಹಲವಾರು ವರ್ಷಗಳಿಂದ ಪ್ರಶಸ್ತಿಗಳನ್ನು ಸ್ವೀಕರಿಸುವುದನ್ನು ನಿಲ್ಲಿಸಲು ನಾನು ನಿರ್ಧರಿಸಿದ್ದೇನೆ. ಅದಕ್ಕೆ ವಿವಿಧ ವೈಯಕ್ತಿಕ ಕಾರಣಗಳಿವೆ’ ಎಂದು ಸುದೀಪ್ ಹೇಳಿದ್ದಾರೆ. ಈ ಮೂಲಕ ಅವಾರ್ಡ್ ಬೇಡ ಎಂದಿದ್ದಾರೆ.

Comments are closed.