Bus Pass: ಗ್ರಾಮೀಣ ಪತ್ರಕರ್ತರಿಗೆ ಜಿಲ್ಲಾ ಬಸ್ ಪಾಸ್: ಆನ್ಲೈನ್ ಅರ್ಜಿ ಆಹ್ವಾನ
Bus Pass: ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಯೋಜನೆಗೆ ಅರ್ಹ ಪತ್ರಕರ್ತರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಮುಖ್ಯಮಂತ್ರಿಗಳು 2024-25 ನೇ ಸಾಲಿನ ಆಯವ್ಯಯದಲ್ಲಿ ಈ ಯೋಜನೆ ಘೋಷಿಸಿದ್ದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ವಿದ್ಯುನ್ಮಾನ ಅಥವಾ ಮುದ್ರಣ ಮಾಧ್ಯಮಗಳಲ್ಲಿ ಪೂರ್ಣಾವಧಿಗೆ ನೇಮಕಗೊಂಡು 4 ವರ್ಷಗಳ ಸೇವಾನುಭವ ಹೊಂದಿರುವ ಪತ್ರಕರ್ತರು ಅರ್ಜಿ ಸಲ್ಲಿಸಬಹುದು. ನೇಮಕಾತಿ ಆದೇಶ/ವೇತನ ಪತ್ರ/ಬ್ಯಾಂಕ್ ಸ್ಟೇಟ್ಮೆಂಟ್ ಗಳಲ್ಲಿ ಯಾವುದಾದರೂ ದಾಖಲೆಗಳನ್ನು ಸೇವಾನುಭವಕ್ಕಾಗಿ ಒದಗಿಸಬೇಕು.
ಜಿಲ್ಲಾ ವ್ಯಾಪ್ತಿಯಲ್ಲಿ ಸಂಚರಿಸುವ ಕರ್ನಾಟಕ ಸಾರಿಗೆ ಸಂಸ್ಥೆ ಬಸ್ಸುಗಳಲ್ಲಿ ಜಿಲ್ಲಾ ವ್ಯಾಪ್ತಿಗೆ ಉಚಿತವಾಗಿ ಸಂಚರಿಸಬಹುದು.ತಹಸೀಲ್ದಾರರಿಂದ ಪಡೆದ ವಾಸಸ್ಥಳ ಪ್ರಮಾಣ ಪತ್ರ ಒದಗಿಸಬೇಕು.
Comments are closed.