DK Shivkumar : ಸರ್ಕಾರ ನಡೆಸಲು ಆಗ್ತಿಲ್ಲ, ಇನ್ಮುಂದೆ ಯಾವುದನ್ನು ಫ್ರೀ ಕೊಡಲ್ಲ !! ಡಿಕೆ ಶಿವಕುಮಾರ್ ಹೇಳಿಕೆ

Share the Article

DK Shivkumar : ಎಲ್ಲವನ್ನು ಫ್ರೀಯಾಗಿ ಕೊಟ್ಟರೆ ಸರ್ಕಾರ ನಡೆಸುವುದು ಹೇಗೆ? ಇನ್ನು ಮುಂದೆ ಯಾವುದನ್ನು ಫ್ರೀ ಕೊಡುವುದಿಲ್ಲ ಎಂದು ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಚ್ಚರಿ ಹೇಳಿಕೆ ನೀಡಿದ್ದಾರೆ.

ಹೌದು, ಕಾವೇರಿ ಭವನದಲ್ಲಿ ಡಿಸಿಎಂ ಡಿಕೆ ಶಿವಕುಮಾರ ನೇತೃತ್ವದಲ್ಲಿ ನಡೆದ ಬಿಬಿಎಂಪಿ, ಬಿಡಿಎ,BWSSB ಅಧಿಕಾರಿಗಳ ಜೊತೆಗಿನ ಪ್ರಗತಿ ಪರಿಶೀಲನಾ ಸಭೆ ಬಳಿಕ ಮಾತನಾಡಿದ ಅವರು, ಸರ್ಕಾರಿ ನೌಕರರು ಸಂಬಳ ಜಾಸ್ತಿ ಮಾಡಿ ಅಂತಾರೆ, ವಿದ್ಯುತ್ ಫ್ರೀ, ನೀರು ಫ್ರೀ ಅಂದ್ರೆ ಹೇಗೆ ಒಂದು ಪೈಸೆ ಆದ್ರೂ ಬಿಲ್ ಕಟ್ಟಬೇಕಲ್ವ? ಎಲ್ಲಾ ಸರಿದೂಗಿಸಿಕೊಂಡು ಹೋಗಬೇಕಲ್ವಾ? ಎಲ್ಲನೂ ಫ್ರೀ ಕೊಟ್ಟರೆ ಸರ್ಕಾರ ನಡೆಸೋದು ಹೇಗೆ? ಇನ್ಮೇಲೆ ಫ್ರೀ ಕೊಡೋಕಾಗೋಲ್ಲ ಎಂದು ಹೇಳಿದ್ದಾರೆ.

ಅಲ್ಲದೆ 2014ರ ನಂತರ ಬೆಂಗಳೂರಿನಲ್ಲಿ ನೀರಿನ ದರ ಏರಿಕೆ‌ ಮಾಡಿಲ್ಲ. ಇದರಿಂದ ತಿಂಗಳಿಗೆ 85 ಕೋಟಿಯಂತೆ ವರ್ಷಕ್ಕೆ 1 ಸಾವಿರ ಕೋಟಿ ಸಂಸ್ಥೆ ನಷ್ಟ ಎದುರಿಸುತ್ತಿದೆ. ಹೀಗಾಗಿ ನೀರಿನ ದರ ಏರಿಕೆ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಶೀಘ್ರವೇ ನೀರಿ‌ನ ದರ ಏರಿಕೆ ಮಾಡುತ್ತೇನೆ, ಜಲಮಂಡಳಿ ಉಳಿಬೇಕು ಅಂದ್ರೆ ದರ ಏರಿಕೆ ಅನಿವಾರ್ಯ ಎಂದು ಹೇಳಿದ್ದಾರೆ.

Comments are closed.