West Bengal : ಕ್ಲಾಸಿನಲ್ಲೇ ತನ್ನ ವಿದ್ಯಾರ್ಥಿಯನ್ನು ಮದುವೆಯಾದ ಮಹಿಳಾ ಪ್ರೊಫೆಸರ್ – ವಿಡಿಯೋ ವೈರಲ್

West Bengal: ಕಾಲೇಜಿನ ತರಗತಿಯಲ್ಲೇ ಮಹಿಳಾ ಪ್ರಾಧ್ಯಾಪಕರೊಬ್ಬರು ತನ್ನ ವಿದ್ಯಾರ್ಥಿಯನ್ನು ಮದುವೆಯಾಗಿರುವ ವಿಚಿತ್ರ ಪ್ರಕರಣ ಬೆಳಕಿಗೆ ಬಂದಿದೆ. ಸಧ್ಯ ಈ ವಿಡಿಯೋ ವೈರಲ್ ಆಗುತ್ತಿದೆ.
A lady Professor in MAKAUT is ‘getting married’ to her young student in the office. pic.twitter.com/coXaVGH7s7
— Abir Ghoshal (@abirghoshal) January 29, 2025
ಹೌದು, ಪಶ್ಚಿಮ ಬಂಗಾಳದ ಹರಿಂಗಟಾದಲ್ಲಿರುವ ಮೌಲಾನಾ ಅಬುಲ್ ಕಲಾಂ ಆಜಾದ್ ತಂತ್ರಜ್ಞಾನ ವಿಶ್ವವಿದ್ಯಾಲಯದಲ್ಲಿಈ ಘಟನೆ ನಡೆದಿದೆ. ಅಪ್ಲೈಡ್ ಸೈಕಾಲಜಿ ವಿಭಾಗದ ಅಧ್ಯಾಪಕರೊಬ್ಬರು ವಧುವಿನಂತೆ ಬಟ್ಟೆ ಧರಿಸಿ , ಹೂಮಾಲೆಯನ್ನು ಪರಸ್ಪರ ಹಾಕಿಕೊಳ್ಳುವುದನ್ನು ವಿಡಿಯೋದಲ್ಲಿ ಕಾಣಬಹುದು. ಆತ ಆಕೆಯ ಹಣೆಗೆ ಸಿಂಧೂರ ಇಟ್ಟಿದ್ದಾನೆ.
ಇನ್ನು ಮದುವೆ ವಿಡಿಯೋ ಸಾಕಷ್ಟು ವೈರಲ್ ಆಗಿದ್ದು, ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ಟೀಕೆ ಮತ್ತು ಆಕ್ರೋಶ ವ್ಯಕ್ತವಾಗಿದೆ. ಘಟನೆಗೆ ಪ್ರತಿಕ್ರಿಯೆಯಾಗಿ, ವಿಶ್ವವಿದ್ಯಾನಿಲಯದ ಅಧಿಕಾರಿಗಳು ಈ ವಿಷಯದ ಬಗ್ಗೆ ತನಿಖೆ ಮಾಡಲು ಮೂರು ಸದಸ್ಯರ ತನಿಖಾ ಸಮಿತಿಯನ್ನು ರಚಿಸಿದೆ. ವಿಶ್ವವಿದ್ಯಾನಿಲಯವು ಸಂಬಂಧಪಟ್ಟ ಪ್ರಾಧ್ಯಾಪಕರಿಂದ ವಿವರಣೆಯನ್ನು ಕೇಳಿದೆ.
ಫ್ರೆಷರ್ ಪಾರ್ಟಿ ವೇಳೆ ಈ ಘಟನೆ ನಡೆದಿದೆ, ಇದು ಪ್ರಾಜೆಕ್ಟ್ನ ಒಂದು ಭಾಗವಾಗಿತ್ತು, ನಮ್ಮ ಕಾಲೇಜಿನ ಪ್ರತಿಷ್ಠೆಗೆ ಧಕ್ಕೆ ತರಲು ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ. ಅದಕ್ಕೆ ಕಾರಣರಾದವರ ವಿರುದ್ಧ ಪೊಲೀಸ್ ದೂರು ದಾಖಲಿಸಲು ನಿರ್ಧರಿಸಿರುವುದಾಗಿ ಹೇಳಿದ್ದಾರೆ. ನಾವು ಫ್ರೆಷರ್ ಪಾರ್ಟಿಗಾಗಿ ಯೋಜಿಸಿದ್ದ ನಾಟಕ. ಇದನ್ನು ನನ್ನ ವಿರುದ್ಧದ ಪಿತೂರಿಯ ಭಾಗವಾಗಿ ಉದ್ದೇಶಪೂರ್ವಕವಾಗಿ ವೈರಲ್ ಮಾಡಲಾಗಿದೆ. ಅಲ್ಲದೆ ಇದಕ್ಕೆ ಕಾರಣರಾದವರ ವಿರುದ್ಧ ಪೊಲೀಸ್ ದೂರು ದಾಖಲಿಸಲು ಉದ್ದೇಶಿಸಿದ್ದಾರೆ ಎಂದು ಹೇಳಿದ್ದಾರೆ.
Comments are closed.