Tiruvanantapuram: ದಕ್ಷಿಣ ಕನ್ನಡ ಜಿಲ್ಲೆಯ ಈ ಅರ್ಚಕರಿಗೆ ಒಲಿಯಿತು ಅದೃಷ್ಟ – ದೇಶದ ಶ್ರೀಮಂತ ದೇವಾಲಯದ ಪ್ರಧಾನ ಅರ್ಚಕರಾಗಿ ಆಯ್ಕೆ!!

Tiruvanantapuram: ಕೇರಳದ ತಿರುವನಂತಪುರದ ಅನಂತಪದ್ಮನಾಭಸ್ವಾಮಿ ದೇವಸ್ಥಾನದ ಬಗ್ಗೆ ಯಾರಿಗೆ ಗೊತ್ತಿಲ್ಲ ಹೇಳಿ. ಅತಿ ಹೆಚ್ಚು ಆಸ್ತಿ-ಪಾಸ್ತಿ, ನಗ ನಾಣ್ಯಗಳನ್ನು ಹೊಂದುವ ಮೂಲಕ ದೇಶದ ಅತಿ ಶ್ರೀಮಂತ ದೇವಾಲಯ ಎಂಬ ಹೆಗ್ಗಳಿಕೆಗೆ ಇದು ಪಾತ್ರವಾಗಿದೆ. ಇದೀಗ ಈ ಶ್ರೀಮಂತ ದೇವಾಲಯದ ಪ್ರಧಾನ ಅರ್ಚಕರಾಗಿ ದಕ್ಷಿಣ ಕನ್ನಡ ಜಿಲ್ಲೆಯ ಅರ್ಚಕರು ನೇಮಕಗೊಂಡಿದ್ದಾರೆ.

ಹೌದು, ಬೆಳ್ತಂಗಡಿ ತಾಲೂಕಿನ ಕೊಕ್ಕಡ ನಿವಾಸಿ ಸತ್ಯನಾರಾಯಣ ತೋಡ್ತಿಲ್ಲಾಯ (45) (Sathyanarayana Thodtillaya) ಇದೀಗ ದೇಶದ ಅತೀ ಶ್ರೀಮಂತ ದೇವಸ್ಥಾನಕ್ಕೆ ಮಹಾ ಪ್ರಧಾನ ಅರ್ಚಕರಾಗಿ ಆಯ್ಕೆಯಾಗಿದ್ದಾರೆ. ಇದೀಗ ಅವರು ದೇವಸ್ಥಾನದಿಂದ ನೀಡಲಾಗುವ ಛತ್ರಿ ಮರ್ಯಾದೆ‌ ಸ್ವೀಕರಿಸುವ ಮಹಾ ಪ್ರಧಾನ ಅರ್ಚಕ‌ ಸ್ಥಾನವನ್ನು ಅಲಂಕರಿಸಲಿದ್ದಾರೆ.

ಯಾರು ಈ ಸತ್ಯನಾರಾಯಣ ತೋಡ್ತಿಲ್ಲಾಯ?
ಸತ್ಯನಾರಾಯಣ ತೋಡ್ತಿಲ್ಲಾಯ ಮೂಲತಃ ಕೊಕ್ಕಡ ಗ್ರಾಮದ ಬಡೆಕ್ಕರ ನಿವಾಸಿಯಾಗಿದ್ದಾರೆ. ಇವರು ದಿ. ಸುಬ್ರಾಯ ತೋಡ್ತಿಲ್ಲಾಯ ಮತ್ತು ದಿ.ಯಶೋಧ ದಂಪತಿಗಳ ಪುತ್ರ. ಕಳೆದ 20 ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿರುವ ನಾರಾಯಣ ತೋಡ್ತಿಲ್ಲಾಯರು, ಪಾಲಾಲೆ ದಿ. ಸತೀಶ ಯಡಪಡಿತ್ತಾಯ ಅವರ ಬಳಿ ವೇದ ಅಭ್ಯಾಸವನ್ನು ಮಾಡಿದ್ದಾರೆ.

ಇನ್ನು ಸತ್ಯನಾರಾಯಣ ಅವರ ತಂದೆ ಸುಬ್ರಾಯ ತೋಡ್ತಿಲ್ಲಾಯರು ಕೂಡ 2 ವರ್ಷಗಳ ಕಾಲ ಈ ಶ್ರೀಮಂತ ದೇವಾಲಯದಲ್ಲಿ ಕಾರ್ಯನಿರ್ವಹಿಸಿದ್ದರು. ಇನ್ನು ಇವರ ಅಜ್ಜ ದಿ.ನಾರಾಯಣ ತೋಡ್ತಿಲ್ಲಾಯರು ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸನ್ನಿಧಿಯಲ್ಲಿ ಹಲವು ವರ್ಷಗಳ ಕಾಲ ಪೂಜಾ ಸೇವೆಯನ್ನು ಸಲ್ಲಿಸಿದ್ದರು.

Comments are closed.