Sonia Gandhi : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ‘Poor lady’ ಎಂದು ವಿವಾದದ ಕಿಡಿ ಹೊತ್ತಿಸಿದ ಸೋನಿಯಾ ಗಾಂಧಿ !! ವಿಡಿಯೋ ವೈರಲ್

Sonia Gandhi: ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ‘poor lady’ ಇಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಸಂಬಧಿಸಿದ್ದು ಇದು ದೇಶಾದ್ಯಂತ ವಿವಾದವನ್ನು ಸೃಷ್ಟಿಸಿದೆ.

ಹೌದು, ಇಂದಿನಿಂದ ಅಧಿವೇಶನಗಳು ಆರಂಭವಾಗಿದ್ದು, ಇಂದು ಸಂಸತ್ ಅನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಮಾಡಿದ್ದಾರೆ. ಈ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಕಾಂಗ್ರೆಸ್ ನಾಯಕ ಸೋನಿಯಾ ಗಾಂಧಿ, ‘ಪಾಪ, ರಾಷ್ಟ್ರಪತಿ ಮುರ್ಮು ಕೊನೆಯಲ್ಲಿ ಬಹಳ ಸುಸ್ತಾಗಿ ಬಿಟ್ಟಿದ್ದರು, ಅವರಿಗೆ ಮಾತನಾಡಲು ಕಷ್ಟವಾಗುತ್ತಿತ್ತು. ಇದು ಬೇಸರದ ಸಂಗತಿ’ ಎಂದು ಹೇಳಿದ್ದರು. ಇದು ವಿವಾದದ ಕಿಡಿ ಹೊತ್ತಿಸಿದೆ.

ಮಾಧ್ಯಮ ಸಂವಾದದ ಸಮಯದಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ರಾಹುಲ್ ಗಾಂಧಿ ಉಪಸ್ಥಿತರಿದ್ದರು. ಈ ಕ್ಲಿಪ್ನಲ್ಲಿ ರಾಹುಲ್ ಗಾಂಧಿ ರಾಷ್ಟ್ರಪತಿಗಳ ಭಾಷಣವನ್ನು ನೀರಸ ಎಂದು ಕರೆದಿದ್ದಾರೆ. ಅಲ್ಲದೆ ಸೋನಿಯಾ ಗಾಂಧಿ ಅವರ ಹೇಳಿಕೆಯ ವೀಡಿಯೊ ಕ್ಲಿಪ್ ಹೊರಬಂದ ನಂತರ, ಭಾರತೀಯ ಜನತಾ ಪಕ್ಷ (ಬಿಜೆಪಿ) ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷರನ್ನು ತರಾಟೆಗೆ ತೆಗೆದುಕೊಂಡಿದೆ. ಕೇಂದ್ರ ಆರೋಗ್ಯ ಸಚಿವ ಮತ್ತು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಕಾಂಗ್ರೆಸ್ ಅನ್ನು “ಬುಡಕಟ್ಟು ವಿರೋಧಿ” ಎಂದು ಕರೆದಿದ್ದಾರೆ.

ಇನ್ನು ಈ ಹೇಳಿಕೆಗೆ ರಾಷ್ಟ್ರಪತಿ ಭವನ ಪ್ರತಿಕ್ರಿಯೆ ನೀಡಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ದೀನದಲಿತರ ಕಲ್ಯಾಣಕ್ಕಾಗಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ತಮ್ಮ ಸಾಂವಿಧಾನಿಕ ಕರ್ತವ್ಯಗಳನ್ನು ಸಮರ್ಪಣಾಭಾವದಿಂದ ನಿರ್ವಹಿಸುತ್ತಿದ್ದಾರೆ. ಅವರು ಸುಸ್ತಾಗಿರಲಿಲ್ಲ. ಕಾಂಗ್ರೆಸ್​ನ ಹಿರಿಯ ನಾಯಕರು ನೀಡಿರುವ ಹೇಳಿಕೆ ರಾಷ್ಟ್ರಪತಿ ಹುದ್ದೆಯ ಘನತೆಗೆ ಧಕ್ಕೆ ತಂದಿದೆ. ಇದು ಸ್ವೀಕಾರಾರ್ಹವಲ್ಲ ಎಂದು ಸೋನಿಯಾ ಗಾಂಧಿಯ ಹೆಸರು ಪ್ರಸ್ತಾಪಿಸದೆ ರಾಷ್ಟ್ರಪತಿ ಭವನ ಪ್ರಕಟಣೆ ಹೊರಡಿಸಿದೆ.

Comments are closed.